LATEST NEWS
ಕೊರೊನಾ- ಸೆಕ್ಷನ್ 144 -3 ನಿರ್ಬಂಧ ಜಾರಿ

ಕೊರೊನಾ- ಸೆಕ್ಷನ್ 144 -3 ನಿರ್ಬಂಧ ಜಾರಿ
ಮಂಗಳೂರು ಮಾರ್ಚ್ 17 : ಕೋವಿಡ್ – 19 (ಕೋರೊನಾ ವೈರಾಣು ಕಾಯಿಲೆ 2019)ಯ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಜರುಗುವ ಎಲ್ಲಾ ಧಾರ್ಮಿಕ ಸಂಸ್ಥೆಗಳಿಗೆ ಸೇರಿದ ಜಾತ್ರೆಗಳು, ಸಭೆ ಸಮಾರಂಭಗಳು, ಸಾಂಸ್ಕøತಿಕ ಕಾರ್ಯಕ್ರಮಗಳು, ಸಂತೆ, ಜಾತ್ರೆ, ಉತ್ಸವ, ಸಾಮೂಹಿಕ ವಿವಾಹಗಳು ಹಾಗೂ ಇನ್ನಿತರ ಜನಸಂದಣಿ ಸೇರುವ ಕಾರ್ಯಕ್ರಮಗಳಿಂದ ಸೋಂಕು ಹರಡುವ ಸಾಧ್ಯತೆಯಿರುವ ಕಾರಣದಿಂದ ಸರ್ಕಾರದ ಆದೇಶದಂತೆ ಸಾರ್ವಜನಿಕರ ಹಿತದೃಷ್ಟಯಿಂದ ಜಿಲ್ಲೆಯಾದ್ಯಂತ ಮಾರ್ಚ್ 17 ರಿಂದ ಮುಂದಿನ ಆದೇಶ ಜಾರಿಗೊಳಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಸಿಂಧೂ ಬಿ. ರೂಪೇಶ್ ಅವರು ಸಿ.ಆರ್.ಪಿ.ಸಿ ಸೆಕ್ಷನ್ 144(3) ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈ ಕೆಳಕಂಡಂತೆ ಆದೇಶಿಸಿದ್ದಾರೆ.
ಜಿಲ್ಲೆಯಾದ್ಯಂತ ದೇವಸ್ಥಾನಗಳಲ್ಲಿ ನಡೆಯುವ ಉತ್ಸವ, ಜಾತ್ರೆಗಳಲ್ಲಿ ಕೇವಲ ದೇವಸ್ಥಾನಗಳ ಸಿಬ್ಬಂದಿ ಮಾತ್ರ ಭಾಗವಹಿಸುವಂತೆ ಸೂಚಿಸಲಾಗಿದೆ. ಉತ್ಸವಗಳಲ್ಲಿ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ದೇವಸ್ಥಾನಗಳಲ್ಲಿ ಕೇವಲ ದೇವರ ದರ್ಶನವನ್ನು ಹೊರೆತು ಪಡಿಸಿ ಉಳಿದ ಎಲ್ಲಾ ಸೇವೆಗಳನ್ನು ರದ್ದುಪಡಿಸಲಾಗಿದೆ ಹಾಗೂ ದೇವಸ್ಥಾನಗಳಿಗೆ ಬರುವ ಸಾರ್ವಜನಿಕರಿಗೆ ತಂಗಲು ಅವಕಾಶ ಇರುವುದಿಲ್ಲ.

ದೇವಸ್ಥಾನ, ಮಸೀದಿ, ಚರ್ಚ್ ಒಳಗೊಂಡಂತೆ ಎಲ್ಲಾ ಧಾರ್ಮಿಕ ಕೇಂದ್ರಗಳಲ್ಲಿ ಗುಂಪು ಗುಂಪಾಗಿ ಸಾರ್ವಜನಿಕರು ಪ್ರವೇಶಿಸಬಾರದೆಂದು ಸೂಚಿಸಲಾಗಿದೆ, ಬೇಸಿಗೆ ಶಿಬಿರ ಸಮಾರಂಭಗಳು, ವಿಚಾರ ಸಂಕಿರಣಗಳು ಮತ್ತಿತರ ಯಾವುದೇ ಕಾರ್ಯಕ್ರಮಗಳನ್ನು ಆಯೋಜಿಸಿದಂತೆ ಆದೇಶಿಸಲಾಗಿದೆ, ಬೀಚ್‍ಗಳಿಗೆ ಸಾರ್ವಜನಿಕರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಮದುವೆ ಸಮಾರಂಭಗಳನ್ನು ಹೆಚ್ಚಿನ ಜನಸಂದಣಿ ಸೇರದಂತೆ ಸರಳವಾಗಿ ಆಯೋಜಿಸಲು ಸೂಚಿಸಲಾಗಿದೆ.
ಪಿ.ಜಿ. ಮತ್ತು ವಸತಿ ನಿಲಯಗಳಲ್ಲಿ ವಾಸಿಸುವ ವಿದ್ಯಾರ್ಥಿ/ವಿದ್ಯಾರ್ಥಿನಿಯರು ತಮ್ಮ ಶಿಕ್ಷಣ ಸಂಸ್ಥೆಗಳು ಕೋವಿಡ್-19 ರ ಹಿನ್ನೆಲೆಯಲ್ಲಿ ರಜೆ ಘೋಷಿಸಿದ್ದಲ್ಲಿ ತಮ್ಮ ತಮ್ಮ ಮನೆಗಳಿಗೆ ವಾಪಾಸು ಹೋಗಲು ಸಲಹೆ ನೀಡಬೇಕು. ಒಂದು ವೇಳೆ ಯಾರಾದರೂ ಪಿ.ಜಿ. ಮತ್ತು ವಸತಿ ನಿಲಯಗಳಲ್ಲಿ ಉಳಿದುಕೊಳ್ಳಲು ಬಯಸಿದ್ದಲ್ಲಿ ಅಂತಹವರಿಗೆ ಪಿಜಿ ಹಾಗೂ ವಸತಿ ನಿಲಯಗಳು ಮಾಲಿಕರು/ವ್ಯವಸ್ಥಾಪಕರು ಕರ್ನಾಟಕ ಸರಕಾರವು ನೀಡುರುವ ಸಲಹೆಗಳಂತೆ ವೈಯಕ್ತಿಕ ಸ್ವಚ್ಚತೆಗಳ ಬಗ್ಗೆ ಮನವರಿಕೆ ಮಾಡಿಕೊಡಬೇಕು.
ನಿಯತಕಾಲಿಕವಾಗಿ ಪಿ.ಜಿ. ವಸತಿ ನಿಲಯಗಳಲ್ಲಿ ವಾಸಿಸುವವರಿಗೆ ಅನಾನುಕೂಲವಾಗದಂತೆ ಹಾಗೂ ಯಾವುದೇ ಸೋಂಕು ಹರಡದಂತೆ ಕೋಣೆಗಳಲ್ಲಿ ಜನದಟ್ಟಣೆಯನ್ನು ಕಡ್ಡಾಯವಾಗಿ ನಿರ್ಬಂಧಿಸಲಾಗಿದೆ. ಪಿ.ಜಿ./ವಸತಿ ನಿಲಯಗಳ ಆವರಣಗಳಲ್ಲಿ ನೈರ್ಮಲ್ಯತೆ ಹಾಗೂ ಸ್ವಚ್ಚತೆ ಕಾಪಾಡಲು ನೀಡಲಾದ ನಿರ್ದೇಶನಗಳನ್ನು ಅನುಸರಿಸದೇ ಕೋವಿಡ್ – 19 ಹರಡಲು ಕಾರಣಕರ್ತರಾದವರ ವಿರುದ್ಧ ಕಠಿಣ ಕ್ರಮಗಳನ್ನು ಜರಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಸಿದ್ದಾರೆ.