Connect with us

LATEST NEWS

ನಾಳೆಯಿಂದ ಒಂದು ವಾರ ರಾಜ್ಯದಾದ್ಯಂತ ಮಾಲ್, ಕಾಲೇಜು ಜಾತ್ರೆ ಸಮಾರಂಭಗಳು ಬಂದ್

ನಾಳೆಯಿಂದ ಒಂದು ವಾರ ರಾಜ್ಯದಾದ್ಯಂತ ಮಾಲ್, ಕಾಲೇಜು ಜಾತ್ರೆ ಸಮಾರಂಭಗಳು ಬಂದ್

ಮಂಗಳೂರು ಮಾರ್ಚ್ 13: ಕರೋನಾ ವೈರಸ್ ಆತಂಕದ ಹಿನ್ನಲೆ ನಾಳೆಯಿಂದ ಒಂದು ವಾರ ಕಾಲ ಕರ್ನಾಟಕದಲ್ಲಿ ಮಾಲ್, ಸಿನಿಮಾ ಥಿಯೇಟರ್, ಎಲ್ಲ ಸಮಾರಂಭಗಳು ಬಂದ್ ಮಾಡಲು ರಾಜ್ಯ ಸರಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಇಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ತುರ್ತು ಸಭೆ ನಡೆಯಿತು. ಸಭೆಯ ಬಳಿಕ ಮಾಲ್, ಚಿತ್ರ ಮಂದಿರ, ಸಮ್ಮರ್, ನೈಟ್ ಕ್ಲಬ್, ಸ್ವಿಮ್ಮಿಂಗ್ ಫುಲ್, ಸಭೆ ಸಮಾರಂಭ ಜಾತ್ರೆ ಎಲ್ಲ ಒಂದು ವಾರ ಕಾಲ ನಿಲ್ಲಿಸಲು ಸೂಚನೆ ನೀಡಲಾಗಿದೆ. ಎಲ್ಲ ವಿವಿಗಳು ಬಂದ್ ಆಗಲಿದ್ದು, ಸಾಧ್ಯವಾದಷ್ಟು ಪ್ರವಾಸ ಮಾಡುವುದನ್ನು ರದ್ದು ಮಾಡಬೇಕೆಂದು ಸರ್ಕಾರ ಕೇಳಿಕೊಂಡಿದೆ. ಮದುವೆಯಂತಹ ಸಮಾರಂಭಗಳನ್ನು ಸರಳ ರೀತಿಯಲ್ಲಿ ಆಚರಿಸಲು ಮುಖ್ಯಮಂತ್ರಿ ಕರೆ ನೀಡಿದ್ದಾರೆ.

ಮುಂದಿನ ವಾರ ನಡೆಯಬೇಕಿದ್ದ ಎಲ್ಲಾ ಪರೀಕ್ಷೆ ಮುಂದೂಡಿಕೆಯಾಗಲಿದೆ. ಎಸ್ ಎಸ್ ಎಲ್ ಸಿ ಇತರೆ ಪರೀಕ್ಷೆಗಳು ಎಂದಿನಂತೆ ನಡೆಯಲಿದೆ. ಐಟಿ ಯವರಿಗೆ ವರ್ಕ್ ಫ್ರಂ ಹೋಮ್ ಮಾಡಲು ಈಗಾಗಲೇ ಸೂಚನೆ ನೀಡಿದ್ದೇವೆ. ಅಧಿವೇಶನ ಎಂದಿನಂತೆ ನಡೆಯುತ್ತದೆ. ಸರ್ಕಾರಿ ಕಚೇರಿಗಳು ಎಂದಿನಂತೆ ನಡೆಯುತ್ತವೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು.

ಇಂದು ತೆಗೆದುಕೊಂಡ ನಿರ್ಧಾರ ಇಡಿ ರಾಜ್ಯಕ್ಕೆ ಅನ್ವಯವಾಗಲಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ಈ ತೀರ್ಮಾನವನ್ನು ಕೈಗೊಂಡಿದ್ದೇವೆ ಎಂದು ಸಿಎಂ ತಿಳಿಸಿದರು.