Connect with us

    LATEST NEWS

    ನರ್ಸಿಂಗ್ ಕಾಲೇಜು, ಇತರ ಅರೆ ವೈದ್ಯಕೀಯ ಕಾಲೇಜು ಪ್ರಾರಂಭ – ಕೋವಿಡ್ ಪರೀಕ್ಷೆ ಕಡ್ಡಾಯ

    ಮಂಗಳೂರು ಡಿಸೆಂಬರ್ 29 – ಕೇರಳದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಏರಿಕೆ ಹಿನ್ನಲೆ ಜಿಲ್ಲೆಯಾದ್ಯಂತ ಇರುವ ನರ್ಸಿಂಗ್ ಕಾಲೇಜು, ಇತರ ಅರೆ ವೈದ್ಯಕೀಯ ಕಾಲೇಜುಗಳ ವಿಧ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸಿ ಜಿಲ್ಲಾಡಳಿತ ಆದೇಶಿಸಿದೆ.


    ಜನವರಿ 1 ರಿಂದ ನರ್ಸಿಂಗ್ ಕಾಲೇಜು, ಇತರ ಅರೆ ವೈದ್ಯಕೀಯ ಕಾಲೇಜುಗಳ ಕಾರ್ಯಾರಂಭವಾಗುವ ಹಿನ್ನೆಲೆ ಇಲ್ಲಿ ವಿದ್ಯಾಭ್ಯಾಸವನ್ನು ನಡೆಸುತ್ತಿರುವ ಹೆಚ್ಚಿನ ವಿದ್ಯಾರ್ಥಿಗಳು ಕೇರಳ ರಾಜ್ಯ, ಇತರ ರಾಜ್ಯ, ಹಾಗೂ ಕರ್ನಾಟಕದ ಇತರ ಜಿಲ್ಲೆಗಳ ವಿದ್ಯಾರ್ಥಿಗಳಿರುತ್ತಾರೆ. ಕೇರಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಪ್ರಕರಣಗಳು ಕಂಡುಬರುತ್ತಿದ್ದು, ಜಿಲ್ಲೆಯಲ್ಲಿ ಕೋವಿಡ್-19 ಎರಡನೇ ಅಲೆ ತಡೆಗಟ್ಟುವುದು ಮುಖ್ಯವಾಗಿರುವುದರಿಂದ ಎಲ್ಲಾ ಶಾಲಾ ಕಾಲೇಜುಗಳ ಮುಖ್ಯಸ್ಥರುಗಳು ಕಾಲೇಜು ಆರಂಭವಾಗುವ 72 ಗಂಟೆಗಳ ಮುಂಚೆ, ವಿದ್ಯಾರ್ಥಿಗಳು ಹಾಗೂ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಕಡ್ಡಾಯವಾಗಿ ಕೋವಿಡ್-19 ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಪಟ್ಟು ನೆಗಟಿವ್ ವರದಿಯೊಂದಿಗೆ ಹಾಜರಾಗಬೇಕು. ಹಾಗೂ ಎಲ್ಲಾ ಕಾಲೇಜುಗಳು/ ಇತರ ಅರೆ ವೈದ್ಯಕೀಯ ಕಾಲೇಜುಗಳು ಸರ್ಕಾರದಿಂದ ನೀಡಿರುವ ಪ್ರಮಾಣಿತ ಕಾರ್ಯಚರಣಾ ಮಾರ್ಗಸೂಚಿಗಳನ್ನು (ಎಸ್‌ಓಪಿ)ಯನ್ನು ಕಡ್ಡಾಯವಾಗಿ ಪಾಲಿಸಬೇಕು. ದೇಶದ್ಯಾದಂತ ಕೋವಿಡ್-19 ಎರಡನೇ ಅಲೆಯು ಹರಡುವ ಸಾಧ್ಯತೆಯ ಗಂಭೀರತೆಯನ್ನು ತಿಳಿದುಕೊಂಡು ಅತ್ಯವಶಕ ಮುನ್ನೆಚ್ಚರಿಕಾ ಕ್ರಮಗಳನ್ನು ಅಳವಡಿಸಬೇಕು ಎಂದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply