Connect with us

LATEST NEWS

ಕೇರಳ ವಿಧ್ಯಾರ್ಥಿಗಳಿಗೆ ಕೊರೊನಾ ಟೆಸ್ಟ್ ಕಡ್ಡಾಯ – ಜಿಲ್ಲಾಧಿಕಾರಿ

ಮಂಗಳೂರು ಫೆಬ್ರವರಿ 8: ದಕ್ಷಿಣಕನ್ನಡ ಜಿಲ್ಲೆಗೆ ಆಗಮಿಸುವ ಕೇರಳದ ಎಲ್ಲಾ ವಿಧ್ಯಾರ್ಥಿಗಳಿಗೆ ಕೊರೊನಾ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಹೇಳಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಗರದ ಮೆಡಿಕಲ್, ನರ್ಸಿಂಗ್ ಹಾಗೂ ಇನ್ನಿತರ ಶಿಕ್ಷಣ ಸಂಸ್ಥೆಗಳಲ್ಲಿ ಕೇರಳದ ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಕಂಡು ಬರುತ್ತಿದೆ‌. ಈ ಹಿನ್ನೆಲೆ ಎಲ್ಲಾ ಕಾಲೇಜುಗಳ ಕೇರಳದ ವಿದ್ಯಾರ್ಥಿಗಳನ್ನು ಗುರುತಿಸಿ, ಅವರೆಲ್ಲರನ್ನೂ ಕೋವಿಡ್ ತಪಾಸಣೆಗೊಳಪಡಿಸಲಾಗುತ್ತದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹೇಳಿದ್ದಾರೆ.


ದ.ಕ.ಜಿಲ್ಲೆಯಲ್ಲಿ 6-8 ಸಾವಿರ ವಿದ್ಯಾರ್ಥಿಗಳು ಕೇರಳದವರೇ ಇದ್ದಾರೆ. ಈಗಾಗಲೇ ಸಾಕಷ್ಟು ವಿದ್ಯಾರ್ಥಿಗಳು ಸೋಂಕಿತರಾಗಿರುವುದು ಕಂಡು ಬಂದಿದೆ. ಆದ್ದರಿಂದ ಕಡ್ಡಾಯವಾಗಿ ಎಲ್ಲರಿಗೂ ಸೋಂಕು ತಪಾಸಣೆ ನಡೆಸುವ ಕಾರ್ಯ ಮಾಡಲಾಗುತ್ತದೆ ಎಂದು ಹೇಳಿದರು.
ಕೇರಳದಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವುದರಿಂದ ದ.ಕ.ಜಿಲ್ಲೆಯು ಗಡಿ ಪ್ರದೇಶವಾಗಿರುವುದರಿಂದ ಮುಂಜಾಗ್ರತಾ ಕ್ರಮವಹಿಸಲು ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಕಂದಾಯ ಇಲಾಖೆ ಹಾಗೂ ಕಮಿಷನರೇಟ್ ವತಿಯಿಂದ ಚರ್ಚೆ ನಡೆಸಲಾಗಿದೆ.