LATEST NEWS
ಬೆಂಗಳೂರಿನಿಂದ ಉಡುಪಿ ಜಿಲ್ಲೆಗೆ ಆಗಮಿಸುವವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ – ಜಿಲ್ಲಾಧಿಕಾರಿ ಜಗದೀಶ್ ಮನವಿ
ಉಡುಪಿ ಎಪ್ರಿಲ್ 19: ಬೆಂಗಳೂರಿನಿಂದ ಉಡುಪಿ ಜಿಲ್ಲೆಗೆ ಆಗಮಿಸುವವರು ತಮ್ಮ ಕುಟುಂಬದವರ ಸುರಕ್ಷತೆಗಾಗಿ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಮನವಿ ಮಾಡಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಅವರು ಉಡುಪಿ ಜಿಲ್ಲೆಯಲ್ಲಿ ಪ್ರತಿದಿನ 3000 ಸ್ವಾಬ್ ಟೆಸ್ಟ್ ಮಾಡುತ್ತಿದ್ದು, ಜಿಲ್ಲೆಯಲ್ಲಿ ಯಾವುದೇ ಒಂದು ಪ್ರದೇಶದಲ್ಲಿ ಹೆಚ್ಚು ಕೇಸುಗಳು ಪತ್ತೆಯಾಗಿಲ್ಲ, ಜಿಲ್ಲೆಯ ಅಲ್ಲಲ್ಲಿ ಕೆಲವು ಪ್ರಕರಣಗಳು ಬೆಳಕಿಗೆ ಬರುತ್ತಿವೆ, ಇಂದು ಎರಡು ಮೈಕ್ರೋ ಕಂಟೋನ್ಮೆಂಟ್ ಝೋನ್ ಮಾಡುತ್ತಿದ್ದೇವೆ. ಕೇವಲ ಐದು ಪ್ರಕರಣ ಬಂದ ಪರಿಸರದಲ್ಲೂ ಮೈಕ್ರೋ ಕಂಟೋನ್ಮೆಂಟ್ ಝೋನ್ ಮಾಡಲಾಗುತ್ತಿದೆ. ಉಡುಪಿ ಜಿಲ್ಲೆಯಲ್ಲಿ ಐಸಿಯು ಗಳ ಕೊರತೆಯಿಲ್ಲ, ವೆಂಟಿಲೇಟರ್- ಆಕ್ಸಿಜನ್ ವ್ಯವಸ್ಥೆ ಕೂಡ ಪರಿಪೂರ್ಣವಾಗಿದೆ. ಆದರೆ ಜಿಲ್ಲೆಯ ಜನ ಮೈಮರೆಯಬಾರದು, ಸಾರ್ವಜನಿಕ ಕಾರ್ಯಕ್ರಮಗಳನ್ನು ಅಟೆಂಡ್ ಮಾಡಬೇಡಿ, ಜನ ಸೇರುವ ಸ್ಥಳಗಳಿಗೆ ಹೋಗಬೇಡಿ ಎಂದು ಮನವಿ ಮಾಡಿದರು.
ಇನ್ನು ಮಹಾರಾಷ್ಟ್ರ ಮತ್ತು ಕೇರಳದಿಂದ ಬರುವವರು ಕಡ್ಡಾಯ ಕೋವಿಡ್ ರಿಪೋರ್ಟ್ ಕಡ್ಡಾಯವಾಗಿದ್ದು, ಇನ್ನು ಬೆಂಗಳೂರಿನಲ್ಲೂ ಪ್ರಕರಣಗಳ ಸಂಖ್ಯೆ ಸಾಕಷ್ಟು ಹೆಚ್ಚಾಗಿದೆ ಹಾಗಾಗಿ ಬೆಂಗಳೂರಿನಿಂದ ಬಂದವರು ಕೂಡ ಸಾರ್ವಜನಿಕರು ಮತ್ತು ಕುಟುಂಬದ ಹಿತದೃಷ್ಟಿಯಿಂದ ಟೆಸ್ಟ್ ಮಾಡಿಸಿಕೊಳ್ಳಿ ಎಂದರು, ಕೊರೊನಾ ಹೆಲ್ಪ್ ಲೈನ್ ನಂಬರ್ ಗೆ ಕರೆ ಮಾಡಿದರೆ ಜಿಲ್ಲಾಡಳಿತದಿಂದ ಟೆಸ್ಟ್ ಗೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದರು.