KARNATAKA
corona updates: ಕರ್ನಾಟಕ ರಾಜ್ಯದಲ್ಲಿಂದು 104 ಕೊರೋನಾ ಪಾಸಿಟಿವ್ ಪ್ರಕರಣ ದಾಖಲು..!
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರುಗತಿಯಲ್ಲಿದ್ದು ಶನಿವಾರ ಒಂದೇ ದಿನ 104 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 271ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 104 ಹೊಸ ಕೋವಿಡ್-19 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 40,89,356ಕ್ಕೆ ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ 271ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಇಂದು 8 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ ಪ್ರಮಾಣ ಶೇಕಡಾ 5.93ರಷ್ಟಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರಿನಲ್ಲಿಯೇ ಬರೊಬ್ಬರಿ 85 ಜನರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಇದರೊಂದಿಗೆ ರಾಜಧಾನಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 234ಕ್ಕೆ ಏರಿಕೆಯಾಗಿದೆ.