Connect with us

    KARNATAKA

    corona updates: ಕರ್ನಾಟಕ ರಾಜ್ಯದಲ್ಲಿಂದು 104 ಕೊರೋನಾ ಪಾಸಿಟಿವ್ ಪ್ರಕರಣ ದಾಖಲು..!

    ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರುಗತಿಯಲ್ಲಿದ್ದು  ಶನಿವಾರ ಒಂದೇ ದಿನ 104 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

    ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 271ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 104 ಹೊಸ ಕೋವಿಡ್-19 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 40,89,356ಕ್ಕೆ ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ 271ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಇಂದು 8 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ ಪ್ರಮಾಣ ಶೇಕಡಾ 5.93ರಷ್ಟಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರಿನಲ್ಲಿಯೇ ಬರೊಬ್ಬರಿ 85 ಜನರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಇದರೊಂದಿಗೆ ರಾಜಧಾನಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 234ಕ್ಕೆ ಏರಿಕೆಯಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply