LATEST NEWS
ಒತ್ತಾಯ ಪೂರ್ವಕವಾಗಿ ಯಾರಿಗೂ ಕೊರೊನಾ ಲಸಿಕೆ ನೀಡುವುದಿಲ್ಲ – ಕೇಂದ್ರ ಸರಕಾರ
ನವದೆಹಲಿ : ದೇಶದಲ್ಲಿ ಕೊರೊನಾ ಲಸಿಕಾ ಅಭಿಯಾನ ಒಂದು ವರ್ಷ ಕಳೆದಿದ್ದು, ಹೈಕೋರ್ಟ್ ಗಳು ಕಡ್ಡಾಯ ಲಸಿಕೆ ವಿರೋಧಿಸಿ ಸಲ್ಲಿಕೆಯಾದ ಪಿಐಎಲ್ ಗಳನ್ನು ತಿರಸ್ಕರಿಸುತ್ತಿರುವ ಬೆನ್ನಲ್ಲೆ ಕೇಂದ್ರ ಸರಕಾರ ಸುಪ್ರೀಂ ಕೋರ್ಟ್ ಗೆ ದೇಶದಲ್ಲಿ ಒತ್ತಾಯದಿಂದ ಯಾರಿಗೂ ಲಸಿಕೆ ನೀಡುವುದಿಲ್ಲ. ಅಂತಹ ಯಾವುದೇ ಸೂಚನೆಯನ್ನು ಕೇಂದ್ರ ಸರ್ಕಾರ ಅಥವಾ ಆರೋಗ್ಯ ಸಚಿವಾಲಯ ಹೊರಡಿಸಿಲ್ಲ ಎಂದು ತಿಳಿಸಿದೆ.
ಲಸಿಕೆ ಪಡೆಯುವುದನ್ನು ಕಡ್ಡಾಯ ಮಾಡಲಾಗುತ್ತಿದೆ ಮತ್ತು ಮನೆ ಮನೆಗೆ ತೆರಳಿ ಲಸಿಕೆ ನೀಡಲಾಗುತ್ತಿದೆ ಎಂದು ಇವಾರ ಫೌಂಡೇಶನ್ ಎಂಬ ಎನ್‌ಜಿಒ ಒಂದು ಸಲ್ಲಿಸಿದ್ದ ಅರ್ಜಿಗೆ ಕೇಂದ್ರ ಸರ್ಕಾರ ಈ ಉತ್ತರ ನೀಡಿದೆ.
ಲಸಿಕೆ ನೀಡುವುದು ಮತ್ತು ಲಸಿಕೆ ಪಡೆದ ಪ್ರಮಾಣಪತ್ರವನ್ನು ಕಡ್ಡಾಯವಾಗಿ ಹಾಜರುಪಡಿಸುವ ಕ್ರಮವನ್ನು ಎಲ್ಲಿಯೂ ಜಾರಿಗೆ ತಂದಿಲ್ಲ. ಜನರ ಹಿತಾಸಕ್ತಿಯಿಂದ ಮತ್ತು ಕೊರೊನಾ ಸೋಂಕು ಎಲ್ಲೆಡೆ ಹರಡುವುದನ್ನು ತಪ್ಪಿಸಲು ಲಸಿಕೆ ಪಡೆಯುವುದು ಮತ್ತು ಲಸಿಕೆ ಪ್ರಮಾಣಪತ್ರ ಹೊಂದಿರುವುದನ್ನು ಆರೋಗ್ಯ ಸಚಿವಾಲಯ ಅಭಿಯಾನ ಕೈಗೊಂಡಿದೆ. ಆದರೆ ಒತ್ತಾಯದಿಂದ ಯಾರ ಮೇಲೂ ಅದನ್ನೂ ಹೇರಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದೆ.