LATEST NEWS
ದಕ್ಷಿಣಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಮುಸ್ಲೀಂ ವ್ಯಾಪಾರಿಗಳಿಗೆ ಪ್ರವೇಶವಿಲ್ಲ ಫಲಕ
ದಕ್ಷಿಣಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಮುಸ್ಲೀಂ ವ್ಯಾಪಾರಿಗಳಿಗೆ ಪ್ರವೇಶವಿಲ್ಲ ಫಲಕ
ಮಂಗಳೂರು ಎಪ್ರಿಲ್ 7: ದೆಹಲಿಯ ತಬ್ಲೀಗ್ ಜಮಾತ್ ಸಮಾವೇಶದಲ್ಲಿ ಪಾಲ್ಗೊಂಡವರಲ್ಲಿ ಕೊರೊನಾ ಸೊಂಕು ಪ್ರಕರಣ ಹೆಚ್ಚಾಗುತ್ತಿದ್ದಂತೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮುಸ್ಲಿಂ ವ್ಯಾಪಾರಿಗಳ ಪ್ರವೇಶ ವಿರೋಧಿಸಿ ಫಲಕಗಳನ್ನು ಆಳವಡಿಸಲಾಗಿದೆ.
ಜಿಲ್ಲೆಯ ತೊಕ್ಕೊಟ್ಟು, ಕೊಲ್ಯ, ಮಂಗಳೂರಿನ ಅಳಪೆ ಸೇರಿದಂತೆ ಹಲವೆಡೆ ‘ಕೊರೊನಾ ವೈರಸ್ ಸಂಪೂರ್ಣವಾಗಿ ಹೋಗುವವರೆಗೆ ನಮ್ಮ ಊರಿಗೆ ಯಾವುದೇ ಮುಸಲ್ಮಾನ ವ್ಯಾಪಾರಿಗೆ ಪ್ರವೇಶವಿಲ್ಲ’ ಎಂಬ ಫಲಕಗಳನ್ನು ಗ್ರಾಮಗಳ ಪ್ರಮುಖ ಸ್ಥಳಗಳಲ್ಲಿ ಕಿಡಿಗೇಡಿಗಳು ಅಳವಡಿಸಿದ್ದಾರೆ.
ಕೆಲವು ಸ್ಥಳಗಳಲ್ಲಿ ‘ಹಿಂದೂ ಧರ್ಮೀಯರು’ ಎಂಬ ಹೆಸರಿನಲ್ಲಿ ಫಲಕ ಹಾಕಲಾಗಿದೆ. ಇನ್ಜು ಕೆಲವೆಡೆ ‘ಗ್ರಾಮಸ್ಥರು’ ಎಂಬ ಹೆಸರಿನಲ್ಲಿ ಅಳವಡಿಸಲಾಗಿದೆ.
ತಬ್ಲೀಗ್ ಜಮಾತ್ ಸಮಾವೇಶದಲ್ಲಿ ಪಾಲ್ಗೊಂಡವರಲ್ಲಿ ಸೋಂಕು ಕಾಣಿಸಿಕೊಂಡ ಬಳಿಕ ಈ ಬಗೆಯ ಕೃತ್ಯಗಳು ಹೆಚ್ಚುತ್ತಿವೆ. ಮುಸ್ಲಿಂ ಧರ್ಮೀಯರನ್ನು ನಿಂದಿಸಿ ಪ್ರಚೋದನಕಾರಿ ಸಂದೇಶಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಯಬಿಡಲಾಗುತ್ತಿದೆ. ಈ ಸಂಬಂಧ ಪೊಲೀಸರು ಪ್ರಕರಣಗಳನ್ನೂ ದಾಖಲಿಸಿದ್ದಾರೆ.
ಮುಸ್ಲಿಂ ವ್ಯಾಪಾರಿಗಳ ಪ್ರವೇಶ ವಿರೋಧಿಸಿ ಫಲಕ ಅಳವಡಿಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಡಿವೈಎಫ್ಐ ರಾಜ್ಯ ಘಟಕದ ಅಧ್ಯಕ್ಷ ಮುನೀರ್ ಕಾಟಿಪಳ್ಳ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ.