LATEST NEWS
ಭಾರತದಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 50 ಲಕ್ಷ
ನವದೆಹಲಿ ಸೆಪ್ಟೆಂಬರ್ 16: ವಿಶ್ವದಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆಯಲ್ಲಿ ಈಗ ಎರಡನೇ ಸ್ಥಾನದಲ್ಲಿರುವ ಭಾರತ ಅಮೇರಿಕ ಹೊರತು ಪಡಿಸಿ50 ಲಕ್ಷ ಕೊರೊನಾ ವೈರಸ್ ಪ್ರಕರಣ ವರದಿಯಾದ ಏಕೈಕ ದೇಶವಾಗಿ ಭಾರತ ಹೊರಹೊಮ್ಮಿದೆ.
ನಿನ್ನೆ ಒಂದೇ ದಿನ ದೇಶದಲ್ಲಿ ಬರೋಬ್ಬರಿ 90,123 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 50,20,360ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ ಮಹಾಮಾರಿ ವೈರಸ್ 1,290 ಮಂದಿಯನ್ನು ಬಲಿಪಡೆದುಕೊಂಡಿದ್ದು, ಇದರೊಂದಿಗೆ ಈವರೆಗೂ ಸೋಂಕಿನಿಂದಾಗಿ 82,066 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಈ ನಡುವೆ 50,20,360 ಮಂದಿ ಸೋಂಕಿತರ ಪೈಕಿ ಈ ವರೆಗೂ 39,42,361 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ದೇಶಲ್ಲಿನ್ನೂ 9,95,933 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮೂಲಕ ಜಾಗತಿಕವಾಗಿ ಅತೀ ಹೆಚ್ಚು ಮಂದಿ ಗುಣಮುಖರಾದ ದೇಶಗಳ ಪೈಕಿ ಭಾರತವೂ ಒಂದೆನಿಸಿಕೊಂಡಿದೆ.