Connect with us

LATEST NEWS

ಕರೋನಾ ಭೀತಿ ಶಬರಿಮಲೆಗೆ ಬರದಂತೆ ಭಕ್ತರಿಗೆ ಆಡಳಿತ ಮಂಡಳಿ ಸೂಚನೆ

ಕರೋನಾ ಭೀತಿ ಶಬರಿಮಲೆಗೆ ಬರದಂತೆ ಭಕ್ತರಿಗೆ ಆಡಳಿತ ಮಂಡಳಿ ಸೂಚನೆ

ಕೇರಳ ಮಾರ್ಚ್ 11: ಕರೋನಾ ವೈರಸ್ ಗೆ ಕೇರಳ ಸಂಪೂರ್ಣ ಸ್ತಭ್ದವಾಗಿದೆ. ಕೇರಳದಲ್ಲಿ ಕೊರೊನಾ ವೈರಸ್ ವೇಗವಾಗಿಯೇ ಹರಡುತ್ತಿದ್ದು, ನಿನ್ನೆಯಷ್ಟೇ 12ಜನರಲ್ಲಿ ಕಾಣಿಸಿಕೊಂಡಿದ್ದ ಮಹಾಮಾರಿ ಇಂದು 19 ಜನರಲ್ಲಿ ಪತ್ತೆಯಾಗಿದೆ.

ಕೇರಳದಲ್ಲಿ ಕರೋನಾ ಪ್ರಕರಣಗಳು ಹೆಚ್ಚುತ್ತಿದಂತೆ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ಬರಬೇಡಿ ಎಂದು ಶಬರಿಮಲೆ ಆಡಳಿತ ಮಂಡಳಿ ಭಕ್ತರಿಗೆ ಮನವಿ ಮಾಡಿದೆ. ಅಲ್ಲದೆ ಕೊರೊನಾ ಸೋಂಕು ಹರಡುವ ಭೀತಿ ಹಿನ್ನೆಲೆ ಭಕ್ತರು ಶಬರಿಮಲೆ ದೇವಸ್ಥಾನಕ್ಕೆ ಬರುವುದನ್ನು ಕೆಲವು ದಿನಗಳ ಕಾಲ ನಿಲ್ಲಿಸಿ, ಸಾರ್ವಜನಿಕ ಸಭೆಗಳನ್ನ ಒಳಗೊಂಡ ಹಬ್ಬಗಳಲ್ಲಿ ಭಾಗಿಯಾಗಬಾರದು ಎಂದು ದೇವಸ್ವಂ ಆಡಳಿತ ಮಂಡಳಿಯ ಅಧ್ಯಕ್ಷ ಎನ್.ವಾಸು ಭಕ್ತರಲ್ಲಿ ಮನವಿ ಮಾಡಿದ್ದಾರೆ.

ಶುಕ್ರವಾರದಿಂದ ತಿಂಗಳ ಪೂಜೆ ಆರಂಭವಾಗಲಿದೆ. ಇಂದಿನಿಂದ ಮಾರ್ಚ್ 31ರವರೆಗೆ ಕೇರಳದಲ್ಲಿ ಸಿನಿಮಾ ಥಿಯೇಟರ್‍ಗಳು ಬಂದ್ ಆಗಲಿವೆ. ಕೊಚ್ಚಿಯಲ್ಲಿ ನಡೆದ ವಿವಿಧ ಮಲಯಾಳಂ ಸಿನಿಮಾ ಸಂಸ್ಥೆಗಳ ಸಭೆಯಲ್ಲಿ ನಿರ್ಧರಿಸಲಾಗಿದೆ. ಇಂದಿನಿಂದ ಕೇರಳದಲ್ಲಿ ಸಿನಿಮಾ ಪ್ರದರ್ಶನಗಳು ನಡೆಯುವುದಿಲ್ಲ. ಕೊರೊನಾ ವೈರಸ್ ಭೀತಿ ಹಿನ್ನೆಲೆ ಕೇರಳದಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದ್ದು, ಎಸ್‍ಎಸ್‍ಎಲ್‍ಸಿ, ಪಿಯುಸಿ ಪರೀಕ್ಷೆಗಳು ಎಂದಿನಂತೆ ನಡೆಯಲಿವೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *