LATEST NEWS
ಉಡುಪಿಯಲ್ಲಿ ನಾಳೆಯಿಂದ ಮೀನುಗಾರಿಕೆ ಬಂದ್

ಉಡುಪಿಯಲ್ಲಿ ನಾಳೆಯಿಂದ ಮೀನುಗಾರಿಕೆ ಬಂದ್
ಉಡುಪಿ ಮಾರ್ಚ್ 24: ಕರೋನಾ ವೈರಸ್ ಭೀತಿ ಹಿನ್ನಲೆ ನಾಳೆಯಿಂದ ಮೀನುಗಾರರು ಮೀನುಗಾರಿಕೆಗೆ ಇಳಿಯುವಂತಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಹೇಳಿದ್ದಾರೆ.
ಈಗಾಗಲೇ ಕೊರೊನಾ ವೈರಸ್ ಹರಡದಂತೆ ತಡೆಯುವ ನಿಟ್ಟಿನಲ್ಲಿ ಜಿಲ್ಲಾಡಳಿತವು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು ಮೀನುಗಾರರಿಗೂ ಮೀನುಗಾರಿಕೆಗೆ ಇಳಿಯದಂತೆ ಸೂಚನೆ ನೀಡಿದ್ದಾರೆ.

ಹಾಗೆಯೇ ಮೀನುಗಾರಿಕೆಗೆ ಹೋದ ಬೋಟ್‌ಗಳು ವಾಪಾಸ್ ಬರಲು ಮಾತ್ರ ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದು ನಾಳೆಯಿಂದ ಮಲ್ಪೆ ಬಂದರು ಸಂಪೂರ್ಣವಾಗಿ ಬಂದ್ ಆಗಲಿದೆ.