KARNATAKA
ಮುಂಬೈನಲ್ಲಿ XE ಕೊರೊನಾ ತಳಿ ಪತ್ತೆಯಾಗಿಲ್ಲ – ಮಹಾರಾಷ್ಟ್ರ ಆರೋಗ್ಯ ಇಲಾಖೆ

ಮುಂಬೈ ಎಪ್ರಿಲ್ 07: ಕೊರೊನಾ ಸೊಂಕಿನ ಹೊಸ ರೂಪಾಂತರಿ ಪತ್ತೆಯಾಗಿಲ್ಲ ಎಂದು ಕೇಂದ್ರ ಸರಕಾರ ಮಾಹಿತಿ ನೀಡಿದ್ದು, ಕೊರೊನಾ ಸೋಂಕಿನ ಹೊಸ ರೂಪಾಂತರಿಯಾಗಿರುವ ಎಕ್ಸ್‍ಇ ತಳಿ ಪತ್ತೆಯಾಗಿದೆ ಎಂದು ಬೃಹನ್ ಮುಂಬೈ ಮಹಾನಗರಪಾಲಿಕೆ (BMC) ವರದಿ ಮಾಡಿದ ಹಿನ್ನಲೆ ಕೇಂದ್ರ ಸರಕಾರ ಸ್ಪಷ್ಟನೆ ನೀಡಿದೆ.
ಕೇಂದ್ರ ಸರಕಾರದ ಮಾಹಿತಿ ಬಳಿಕ ಎಚ್ಚೇತ್ತ ಮಹಾರಾಷ್ಟ್ರ ಸರಕಾರ ಆರೋಗ್ಯ ಇಲಾಖೆಯ ಹೊಸ ತಳಿ ಪತ್ತೆಯಾಗಿರುವ ಬಗ್ಗೆ ಯಾವುದೇ ದೃಢೀಕರಣವನ್ನು ಸ್ವೀಕರಿಸಿಲ್ಲ. ಆದ್ದರಿಂದ ಎಕ್ಸ್‍ಇ ಪತ್ತೆಯಾಗಿರುವುದು ಕಂಡುಬಂದಿಲ್ಲ.
ಮುಂಬೈನಲ್ಲಿ XE ಕೊರೊನಾ ತಳಿ ಪತ್ತೆಯಾಗಿದೆ ಎಂದು ಹೇಳಿದ್ದ ವರದಿಯನ್ನು ಕೇಂದ್ರ ಸರ್ಕಾರದ ಅಧಿಕಾರಿಗಳು ಅಲ್ಲಗಳೆದಿದ್ದಾರೆ. ಎಕ್ಸ್‍ಇ ತಳಿ ಪತ್ತೆಯಾಗಿರುವುದಕ್ಕೆ ವೈಜ್ಞಾನಿಕ ಪುರಾವೆಗಳಿಲ್ಲ ಎಂದಿದ್ದಾರೆ. ಭಾರತದ ಸಾರ್ಸ್ ಕೋವ್-2 ಜೆನೆಟಿಕ್ಸ್ ಕಾನ್ಸೊರ್ಟಿಯಮ್‍ನ (INSACOG) ಜಿನೋಮ್ ಸೀಕ್ವೆನ್ಸಿಂಗ್ ತಜ್ಞರು ವಿವರವಾಗಿ ಪರಿಶೀಲನೆ ನಡೆಸಿದ್ದು, ಮಾದರಿಯಲ್ಲಿ ಪತ್ತೆಯಾಗಿರುವ ತಳಿಯ ಜಿನೋಮ್ ರಚನೆಗಳಿಗೂ ಎಕ್ಸ್‍ಇ ತಳಿಯ ರಚನೆಗಳೂ ಹೋಲಿಕೆಯಾಗಿಲ್ಲ ಎಂದು ಅಧಿಕೃತ ಮೂಲಗಳಿಂದ ತಿಳಿದು ಬಂದಿದೆ
