Connect with us

    UDUPI

    ಕೊರೊನಾ ಚಿಕಿತ್ಸೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಹರಡಿದರೆ ಕಠಿಣ ಕ್ರಮ – ಉಡುಪಿ ಜಿಲ್ಲಾಧಿಕಾರಿ

    ಉಡುಪಿ ಜಿಲ್ಲಾಡಳಿತ ಕೊರೊನಾ ಚಿಕಿತ್ಸೆಗೆ 3.5 ಲಕ್ಷ ಪಡೆಯುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ

    ಉಡುಪಿ ಜೂನ್ 10: ಸಾಮಾಜಿಕ ಜಾಲತಾಣದಲ್ಲಿ ಜಿಲ್ಲಾಡಳಿತ ಮತ್ತು ಕೊವಿಡ್ ಚಿಕಿತ್ಸೆಯ ಕುರಿತಾಗಿ ಸುಮ್ಮನೆ ಊಹಾಪೋಹಗಳನ್ನು ಹರಿಯಬಿಟ್ಟಲ್ಲಿ ಸೊಂಕು ನಿಯಂತ್ರಣ ಕಾಯ್ದೆಯಡಿಯಲ್ಲಿ ಕೇಸ್ ದಾಖಲು ಮಾಡಿ ಅಂತಹವರ ವಿರುದ್ದ ಕಠಿಣ ಕ್ರಮ ಜರಗಿಸುತ್ತೇವೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಎಚ್ಚರಿಕೆಯನ್ನು ನೀಡಿದ್ದಾರೆ.

    ಉಡುಪಿ ಜಿಲ್ಲಾಡಳಿತ ಕೊವಿಡ್ ರೋಗಿಗಳ ಚಿಕಿತ್ಸೆಗೆ ಸುಮಾರು 3.5 ಲಕ್ಷ ಪಡೆಯುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವುದರ ವಿರುದ್ದ ಗುಡುಗಿದ ಜಿಲ್ಲಾಧಿಕಾರಿಗಳು ಜಿಲ್ಲಾಡಳಿತಕ್ಕೆ ಒಂದೇ ಒಂದು ರೂಪಾಯಿ ಚಿಕಿತ್ಸೆಗಾಗಿ ಬರುವುದಿಲ್ಲ. ಡಾಕ್ಟರ್ ಟಿಎಂಎ ಪೈ ಆಸ್ಪತ್ರೆ ಸೇರಿದಂತೆ ಜಿಲ್ಲೆಯ ಎಲ್ಲಾ ಕೊವಿಡ್ ಹಾಸ್ಪಿಟಲ್ ಗಳಲ್ಲಿ ಉಚಿತ ಚಿಕಿತ್ಸೆಯನ್ನು ‌ನೀಡಲಾಗುತ್ತಿದೆ.

    ಇಷ್ಟರವರೆಗೆ ಗುಣಮುಖರಾದ ರೋಗಿಗಳಿಂದ ಕೂಡಾ ಒಂದೇ ಒಂದು ರುಪಾಯಿ ಯನ್ನು ಜಿಲ್ಲಾಡಳಿತ ಪಡೆದಿಲ್ಲ. ಕೆಲವರು ಸಾಮಾಜಿಕ ಜಾಲತಾಣದಲ್ಲಿ ಏನು ಬೇಕಾದರೂ ಬರೆಯಬಹುದು ಎಂಬ ಭಾವನೆಯಲ್ಲಿ‌ ಇದ್ದಾರೆ ಇದನ್ನು ಮುಂದುವರೆಸಿದರೆ ಅಂತಹವರ ವಿರುದ್ದ ಕಠಿಣ ಕ್ರಮ ಜರಗಿಸಲಾಗುವುದು.

    ಇದುವರೆಗೆ ಜಿಲ್ಲೆಯಲ್ಲಿ 947 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ ಇವರಿಂದ ಯಾವುದೇ ಹಣವನ್ನು ಪಡೆದಿಲ್ಲ. ಡಾಕ್ಟರ್ ಟಿಎಂಎ ಪೈ ಆಸ್ಪತ್ರೆಯಲ್ಲಿ ಕೂಡಾ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ಇಂತಹ ಸಂಸ್ಥೆಗಳ ಹೆಸರನ್ನು ತೆಗೆಯುವ ಮುನ್ನ ಎಚ್ಚರಿಕೆ ವಹಿಸಬೇಕು ಎಂದರು.

    Share Information
    Advertisement
    Click to comment

    You must be logged in to post a comment Login

    Leave a Reply