ಪುತ್ತೂರು ಮಹಿಳಾ ಪೋಲೀಸ್ ಠಾಣೆಯಲ್ಲಿ ಮಹಿಳಾ ಸಾಂತ್ವಾನ ಕೇಂದ್ರ

ಮಂಗಳೂರು ಜನವರಿ 28: ನೊಂದ ಮಹಿಳೆಯರ ಸಾಂತ್ವಾನ ಕೇಂದ್ರವನ್ನು ಪುತ್ತೂರು ಮಹಿಳಾ ಪೋಲೀಸ್ ಠಾಣೆಯಲ್ಲಿ ಉದ್ಘಾಟಿಸಲಾಯಿತು. ಪುತ್ತೂರು ವಿಧಾನ ಸಭಾ ಕ್ಷೇತ್ರದ ಶಾಸಕ ಸಂಜೀವ ಮಠಂದೂರು ಸಾಂತ್ವಾನ ಕೇಂದ್ರವನ್ನು ಉದ್ಘಾಟಿಸಿದರು.

ಸಾಂತ್ವಾನ ಕೇಂದ್ರದ ಬಗ್ಗೆ ಮಾತನಾಡಿದ ದಕ್ಷಿಣಕನ್ನಡ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಬಿ.ಎಂ. ಲಕ್ಷ್ಮೀ ಪ್ರಸಾದ್ ಜಿಲ್ಲೆಯ ಎಲ್ಲಾ ಠಾಣೆಯ ಸಿಬ್ಬಂದಿಗಳಿಗೆ ಕೌನ್ಸಿಲಿಂಗ್ ಕೊಡುವಂತ ವ್ಯವಸ್ಥೆಯನ್ನು ಈಗಾಗಲೇ ಮಾಡಲಾಗಿದ್ದು, ಠಾಣೆಯ ಎಲ್ಲಾ ಸಿಬ್ಬಂದಿಗಳು ಕೌನ್ಸಿಲಿಂಗ್ ಕೊಡುವಲ್ಲಿ ಶಕ್ತರಾಗಿದ್ದಾರೆ. ನೊಂದ ಮಹಿಳೆಯರಿಗೆ ಸರಕಾರದಿಂದ ಬರಬೇಕಾದ ಎಲ್ಲಾ ಸೌಲಭ್ಯಗಳನ್ನು ನೀಡುವ ವ್ಯವಸ್ಥೆಯನ್ನೂ ಈ ಕೇಂದ್ರದ ಮೂಲಕ ಮಾಡಲಾಗುವುದು. ಮಕ್ಕಳಿಗೂ ಈ ಆಸರೆ ಕೇಂದ್ರದ ಮೂಲಕ ಅವರ ಸಮಸ್ಯೆಗಳನ್ನು ತಿಳಿಯುವ ವ್ಯವಸ್ಥೆಯನ್ನೂ ಮಾಡಲಾಗಿದೆ.

ಶಾಲಾ-ಕಾಲೇಜುಗಳಲ್ಲಿ ಕಲಿಯುತ್ತಿರುವ ಮಕ್ಕಳು ಕಾನೂನುಬಾಹಿರ ಚಟುವಟಿಕೆಗಳ ನಿಯಂತ್ರಣವನ್ನೂ ಕೇಂದ್ರದ ಮೂಲಕ ಮಾಡಲಾಗುತ್ತದೆ. ಕೌಟುಂಬಿಕ ಸಮಸ್ಯೆಗಳ ವಿಚಾರದ ಬಗ್ಗೆಯೂ ಮಾಹಿತಿ ನೀಡುವ ವ್ಯವಸ್ಥೆಯನ್ನು ಮಾಡಲಾಗುವುದು ಎಂದರು.

Facebook Comments

comments