Connect with us

    DAKSHINA KANNADA

    ಕಡಬ : ಜಗಳ ಜೊತೆ ವಿಷ ಸೇವಿಸಿದ ದಂಪತಿ – ಪತ್ನಿ ಸಾವು ಗಂಭೀರ ಸ್ಥಿತಿಯಲ್ಲಿ ಪತಿ

    ಕಾಣಿಯೂರು ನವೆಂಬರ್ 5 : ಗಂಡ –ಹೆಂಡತಿ ಜಗಳ ವಿಪರೀತ ಮಟ್ಟಕ್ಕೆ ತಿರುಗಿ ಪತ್ನಿಯ ಸಾವಿನಲ್ಲಿ ಅಂತ್ಯವಾದ ಘಟನೆ ಕಡಬ ತಾಲೂಕಿನ ಕುದ್ಮಾರು ಗ್ರಾಮದ ಚಾಪಲ್ಲ ಎಂಬಲ್ಲಿ ನವೆಂಬರ್ 04ರಂದು ಸಂಜೆ ನಡೆದಿದೆ.


    ಮೃತರನ್ನು ಕುಸುಮ (39 ವರ್ಷ ) ಎಂದು ಗುರುತಿಸಲಾಗಿದೆ. ಕುಸುಮ ಮತ್ತು ಆಕೆಯ ಪತಿ ಸಂಜೀವ ನಡುವೆ ಆಗಾಗ್ಗೆ ಗಲಾಟೆ ನಡೆಯುತ್ತಿತ್ತು. ಅಂತೆಯೇ ಶನಿವಾರ ಕೂಡ ಮಾತಿಗೆ ಮಾತು ಬೆಳೆದಿದೆ. ಕೋಪದ ಭರದಲ್ಲಿ ಇಬ್ಬರು ಕೂಡ ವಿಷ ಸೇವಿಸಿದ್ದಾರೆ. ಈ ವಿಚಾರ ಸ್ಥಳೀಯರಿಗೆ ತಿಳಿದು ತಕ್ಷಣ ಅವರ ಸಂಬಂಧಿಕರಿಗೆ ವಿಚಾರವನ್ನು ತಿಳಿಸಿರುತ್ತಾರೆ. ಅವರು ಬಂದು ತಕ್ಷಣ ಅವರನ್ನು ಆಸ್ಪತ್ರೆಗೆ ಸೇರಿಸುವ ಪ್ರಯತ್ನದಲ್ಲಿದ್ದಾಗ ಕುಸುಮ ತನ್ನ ಪ್ರಾಣವನ್ನು ಕಳೆದುಕೊಂಡಿರುತ್ತಾರೆ. ಸಂಜೀವ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply