FILM
ಕೋರ್ಟ್ ನಲ್ಲಿ ರಮ್ಯಾ ಮುಖಭಂಗ – ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಬಿಡುಗಡೆಗೆ ಕೋರ್ಟ್ ಅನುಮತಿ
ಬೆಂಗಳೂರು ಜುಲೈ 20: ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನೆಮಾ ರಿಲೀಸ್ ಗೆ ಎರಡು ದಿನ ಇರುವಾಗ ಕೋರ್ಟ್ ಮೆಟ್ಟಿಲೇರಿದ ಸಿನೆಮಾ ನಟಿ ರಮ್ಯಾಗೆ ಮುಖಭಂಗವಾಗಿದ್ದು. ಕೋರ್ಟ್ನಲ್ಲಿ ರಮ್ಯಾ ಅವರ ಅರ್ಜಿ ವಜಾ ಆಗಿದ್ದು, ಸಿನಿಮಾ ಬಿಡುಗಡೆಗೆ ಅನುಮತಿ ಸಿಕ್ಕಿದೆ.
ಸದ್ಯ ಕನ್ನಡದಲ್ಲಿ ಭಾರೀ ನಿರಿಕ್ಷೆ ಹುಟ್ಟಿಸಿರುವ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರದ ವಿರುದ್ದ ಅದೇ ಚಿತ್ರದಲ್ಲಿ ಅತಿಥಿ ನಟಿಯಾಗಿ ನಟಿಸಿದ್ದ ರಮ್ಯ ಕೋರ್ಟ್ ಮೆಟ್ಟಿಲೇರಿದ್ದರು. ಈ ಸಿನಿಮಾದಲ್ಲಿ ತಮ್ಮ ವಿಡಿಯೋಗಳನ್ನು ಅನುಮತಿ ಇಲ್ಲದೇ ಬಳಸಿಕೊಳ್ಳಲಾಗಿದೆ ಎಂದು ನಟಿ ರಮ್ಯಾ ದಿವ್ಯ ಸ್ಪಂದನಾ (Ramya Divya Spandana) ಅವರು ಆರೋಪಿಸಿದ್ದರು. ಹಾಗಾಗಿ ಚಿತ್ರದಲ್ಲಿನ ತಮ್ಮ ದೃಶಗಳನ್ನು ತೆಗೆದುಹಾಕುವಂತೆ ಒತ್ತಾಯಿಸಿದ್ದರು. ಅಲ್ಲದೇ ಚಿತ್ರತಂಡಕ್ಕೆ ಲೀಗಲ್ ನೋಟೀಸ್ ಕಳಿಸಿದ್ದರು. ಇದರಿಂದ ಜುಲೈ 21ರಂದು ಸಿನಿಮಾ ಬಿಡುಗಡೆ ಆಗತ್ತೋ ಇಲ್ಲವೋ ಎಂಬ ಅನುಮಾನ ಮೂಡಿತ್ತು. ಆದರೆ ಕೋರ್ಟ್ನಲ್ಲಿ ರಮ್ಯಾ (Ramya) ಅವರ ಅರ್ಜಿ ವಜಾ ಆಗಿದೆ. ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾದ ಬಿಡುಗಡೆಗೆ ನ್ಯಾಯಾಲಯ ಅನುಮತಿ ನೀಡಿದೆ.
ನಿತಿನ್ ಕೃಷ್ಣಮೂರ್ತಿ ಅವರ ನಿರ್ದೇಶನದಲ್ಲಿ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಮೂಡಿಬಂದಿದೆ. ಅಜನೀಶ್ ಬಿ. ಲೋಕನಾಥ್ ಅವರು ಸಂಗೀತ ನೀಡಿರುವ ಹಾಡುಗಳು ಗಮನ ಸೆಳೆದಿವೆ. ಅರವಿಂದ್ ಎಸ್. ಕಶ್ಯಪ್ ಅವರು ಈ ಸಿನಿಮಾಗೆ ಛಾಯಾಗ್ರಹಣ ಮಾಡಿದ್ದಾರೆ. ರಕ್ಷಿತ್ ಶೆಟ್ಟಿ ಒಡೆತನದ ‘ಪರಂವಾ ಪಿಕ್ಚರ್ಸ್’ ಮೂಲಕ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಬಿಡುಗಡೆ ಆಗುತ್ತಿದೆ.