Connect with us

    LATEST NEWS

    ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ : ಪ್ರಮುಖ ಆರೋಪಿ ರಾಜೇಶ್ವರಿ ಶೆಟ್ಟಿಗೆ ಜಾಮೀನು..!!

    ಬೆಂಗಳೂರು: ಉಡುಪಿಯಲ್ಲಿ ನಡೆದ  ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ ಶೆಟ್ಟಿಗೆ ಹೈಕೋರ್ಟ್‌ನಲ್ಲಿ ಜಾಮೀನು ದೊರೆತಿದೆ.

    2016ರ ಜುಲೈ 28ರಂದು ಉದ್ಯಮಿ ಭಾಸ್ಕರ್​ ಶೆಟ್ಟಿ ಅವರನ್ನು ಉಡುಪಿಯ ಇಂದ್ರಾಳಿಯಲ್ಲಿರುವ ಅವರ ಮನೆಯಲ್ಲಿ ಅವರ ಹೆಂಡತಿ ರಾಜೇಶ್ವರಿ ಶೆಟ್ಟಿ ಹಾಗೂ ಮಗ ನವನೀತ್ ಶೆಟ್ಟಿ ಸೇರಿ ಕೊಲೆ ಮಾಡಿದ್ದರು. ಬಳಿಕ ಮೃತದೇಹವನ್ನು ಅರ್ಚಕ ನಿರಂಜನ್ ಭಟ್ ಜತೆ ಸೇರಿ  ಹೋಮದ ಕುಂಡದಲ್ಲಿ ಹಾಕಿ ಸುಟ್ಟಿದ್ದರು.

    ಪ್ರಕರಣಕ್ಕೆ ಸಂಬಂಧಿಸಿ ಕಳೆದ ಜೂನ್‌ನಲ್ಲಿ ಉಡುಪಿ ನ್ಯಾಯಾಲಯವು ಕೊಲೆ ಪ್ರಕರಣದ ಆರೋಪಿಗಳಾದ ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಶೆಟ್ಟಿ ಮತ್ತು ರಾಜೇಶ್ವರಿ ಗೆಳೆಯ, ಅರ್ಚಕ ನಿರಂಜನ್ ಭಟ್‌ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.
    ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ರಾಜೇಶ್ವರಿ ಶೆಟ್ಟಿ ಹೈಕೋರ್ಟ್ ಮೇಟ್ಟಿಲೇರಿದ್ದರು. ಇದೀಗ ರಾಜೇಶ್ವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

    Share Information
    Advertisement
    Click to comment

    You must be logged in to post a comment Login

    Leave a Reply