ಕುಂದಾಪುರ ಡಿಸೆಂಬರ್ 19: ಒಂದು ಕಾಲದ ಹಿಂದೂ ಫೈರ್ ಬ್ರ್ಯಾಂಡ್ ಇದೀಗ ಬಿಗ್ ಬಾಸ್ ಸೆಲೆಬ್ರೆಟಿಯಾಗಿರು ಚೈತ್ರಾ ಕುಂದಾಪುರಳಿಗೆ ಅಪ್ಪನಿಗೆ ಯಾವುದೇ ರೀತಿಯ ರೀತಿ ದೈಹಿಕ, ಮಾನಸಿಕ ಹಿಂಸೆ ನೀಡುವಂತಿಲ್ಲ. ಅವರ ಮನೆಯಲ್ಲಿ ನಿರ್ಭೀತಿಯಿಂದ ಇರಲು ಅವಕಾಶ ಮಾಡಿಕೊಡಬೇಕೆಂದು ಆದೇಶ ನೀಡಿದೆ.


ಚೈತ್ರಾ ಕುಂದಾಪುರ ಅವರ ಅಪ್ಪ ಬಾಲಕೃಷ್ಣ ಅವರು ಪುತ್ರಿ ಚೈತ್ರಾ ಕುಂದಾಪುರ ಅವರಿಂದ ಅನ್ಯಾಯ ಆಗುತ್ತಿದೆ. ನನ್ನ ಮನೆಯಲ್ಲಿ ವಾಸಿಸಲು ಅವಕಾಶ ನೀಡಬೇಕೆಂದು ಕೋರಿ ಹಿರಿಯ ನಾಗರಿಕರ ಪಾಲನೆ ಹಾಗೂ ಕಲ್ಯಾಣ ಕಾಯ್ದೆ ಅನ್ವಯ ಪರಿಹಾರ ಕೋರಿ ನ್ಯಾಯಮಂಡಳಿಯಲ್ಲಿ ಪ್ರಕರಣ ದಾಖಲಿಸಿದ್ದರು.

ತಂದೆಗೆ ಮಗಳು ಯಾವುದೇ ರೀತಿ ದೈಹಿಕ, ಮಾನಸಿಕ ಹಿಂಸೆ ನೀಡುವಂತಿಲ್ಲ. ಅವರ ಮನೆಯಲ್ಲಿ ನಿರ್ಭೀತಿಯಿಂದ ಇರಲು ಅವಕಾಶ ಮಾಡಿಕೊಡಬೇಕು. ಅವರ ಸ್ವತ್ತಿನ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಸೂಕ್ತ ಮುಚ್ಚಳಿಕೆ ನೀಡಬೇಕು ಎಂದು ಎಂದು ಇಲ್ಲಿನ ಉಪವಿಭಾಗಾಧಿಕಾರಿಗಳ ನ್ಯಾಯಾಲಯ ಆದೇಶ ಮಾಡಿದೆ.

Share Information