LATEST NEWS
ಕೋಟದಲ್ಲಿ ಮತ್ತೊಂದು ಕೊರೊನಾ ಪ್ರಕರಣ, ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ಗೆ ಸೋಂಕು

ಕೋಟದಲ್ಲಿ ಮತ್ತೊಂದು ಕೊರೊನಾ ಪ್ರಕರಣ ,ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ಗೆ ಸೋಂಕು
ಉಡುಪಿ ಜೂ.1: ಕುಂದಾಪುರ ತಾಲೂಕಿನ ಕೋಟತಟ್ಟು ಪ್ರದೇಶದಲ್ಲಿ ವಾಸವಿದ್ದ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಸಿಬ್ಬಂದಿಗೆ ಕೊರೊನಾ ಸೊಂಕು ದೃಢಪಟ್ಟಿದೆ.
ಇದೀಗ ಸೋಂಕಿತೆ ವಾಸವಿದ್ದ ಕೋಟತಟ್ಟು ಗ್ರಾ.ಪಂ. ಕಚೇರಿ ಸಮೀಪದ ಮನೆಯ 100 ಮೀಟರ್ ಪ್ರದೇಶವನ್ನು ಸೀಲ್ ಡೌನ್ ಮಾಡಲಾಗಿದೆ ಹಾಗೂ ಸ್ಥಳೀಯರಿಗೆ ಮುನ್ನೆಚ್ಚರಿಕೆ ವಹಿಸುವಂತೆ ತಿಳಿಸಲಾಗಿದೆ.

ಸ್ಥಳೀಯ ಕೋಟ ಸಮುದಾಯ ಆರೋಗ್ಯ ಕೇಂದ್ರದ ಸಿಬಂದಿಗಳು ಸುತ್ತಲಿನ ಸ್ಥಳವನ್ನು ಸ್ಯಾನಿಟೈಸ್ ಮಾಡಿದ್ದು, ಆಶಾ, ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ತೆರಳಿ ಮಾಹಿತಿ ಕಲೆ ಹಾಕಿದ್ದಾರೆ.
ಸೋಂಕಿತ ಮಹಿಳೆಯ ಗಂಟಲದ್ರವವನ್ನು ಹೆಚ್ಚಿನ ತಪಾಸಣೆಗಾಗಿ ಕುಟುಂಬದವರು ಸ್ವಯಂಪ್ರೇರಿತವಾಗಿ ಮತ್ತೊಮ್ಮೆ ಮಣಿಪಾಲ ಆಸ್ಪತ್ರೆಯ ಕೊರೊನಾ ಪ್ರಯೋಗಾಲಯಕ್ಕೆ ನೀಡಿದ್ದು ಫಲಿತಾಂಶವನ್ನು ಎಲ್ಲರೂ ಕುತೂಹಲದಿಂದ ನಿರೀಕ್ಷಿಸುತ್ತಿದ್ದಾರೆ.
ಮಹಿಳೆಯನ್ನು ಉಡುಪಿ ಆಸ್ಪತ್ರೆಗೆ ದಾಖಲಿಸಲಾಗಿದೆ.