Connect with us

    LATEST NEWS

    ಕೋವಿಡ್ ನಿಯಮ ಉಲ್ಲಂಘಿಸಿದರೆ ಬೀಳುತ್ತೆ ಭಾರೀ ದಂಡ…!!

    ಮಂಗಳೂರು, ಎಪ್ರಿಲ್ 02 -ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಕಠಿಣ ಕ್ರಮಕ್ಕೆ ಮುಂದಾಗಿದ್ದು, ಈಗಾಗಲೇ ಜಾರಿಯಲ್ಲಿರುವ ಮಾಸ್ಕ್ ದಂಡವನ್ನು ಹೆಚ್ಚಿಸಲಾಗಿದೆ. ಮುಂಬರುವ ಧಾರ್ಮಿಕ ಹಬ್ಬಗಳಾದ ಯುಗಾದಿ, ಗುಡ್ ಫ್ರೈಡೆ ಇತ್ಯಾದಿ ಹಬ್ಬಗಳ ಸಂದರ್ಭಗಳಲ್ಲಿ ಜಿಲ್ಲೆಯ ಯಾವುದೇ ಸಾರ್ವಜನಿಕ ಸ್ಥಳಗಳು/ ಸಾರ್ವಜನಿಕ ಮೈದಾನ, ಸಾರ್ವಜನಿಕ ಉದ್ಯಾನವನಗಳು, ಮಾರುಕಟ್ಟೆಗಳು, ಧಾರ್ಮಿಕ ಪ್ರದೇಶಗಳಲ್ಲಿ ಸಾರ್ವಜನಿಕ ಸಮಾರಂಭಗಳು , ಸಭೆಗಳನ್ನು ನಡೆಸದಂತೆ ಸೂಚಿಸಲಾಗಿದೆ. ಅಲ್ಲದೆ ಧಾರ್ಮಿಕ ಹಬ್ಬಗಳಿಗೆ ಸಂಬಂಧಿಸಿದಂತೆ ಜಾತ್ರೆಗಳು, ಮೇಳಗಳಲ್ಲಿ ಸಾರ್ವಜನಿಕರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ.

    ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಹಾಗೂ ದೈಹಿಕ ಅಂತರವನ್ನು ಕಾಪಾಡಿಕೊಳ್ಳದೇ ಮಾರ್ಗ ಸೂಚಿಗಳ ಉಲ್ಲಂಘನೆಯಾದಲ್ಲಿ ಮುನ್ಸಿಪಲ್ ಕಾರ್ಪೋರೇಷನ್‍ಗಳ ವ್ಯಾಪ್ತಿಯಲ್ಲಿ ರೂ. 250ನ್ನು ದಂಡ ವಿಧಿಸಲು ಮುಖ್ಯ ಪೇದೆಯ ಶ್ರೇಣಿಗಿಂತ ಕೆಳಗಿನವರಲ್ಲದ ಪೊಲೀಸ್ ಸಿಬ್ಬಂದಿ, ಮುನ್ಸಿಪಲ್ ಕಾರ್ಪೋರೇಷನ್‍ಗಳ ಹೆಲ್ತ್ ಇನ್ಸ್‍ಪೆಕ್ಟರ್‍ಗಳು, ಮುನ್ಸಿಪಲ್ ಕಾರ್ಪೋರೇಷನ್‍ಗಳ ಬಿಲ್ ಕಲೆಕ್ಟರ್‍ಗಳನ್ನು ಅಧಿಕೃತವಾಗಿ ನಿಯೋಜಿಸಲಾಗಿರುತ್ತದೆ.

    ಮುನ್ಸಿಪಲ್ ಕಾರ್ಪೋರೇಷನ್‍ಗಳನ್ನು ಹೊರತುಪಡಿಸಿ ಇತರ ಪ್ರದೇಶಗಳಲ್ಲಿ ರೂ. 100ನ್ನು ದಂಡ ವಿಧಿಸಲು ಮುಖ್ಯ ಪೇದೆಯ ಶ್ರೇಣಿಗಿಂತ ಕೆಳಗಿನವರಲ್ಲದ ಪೊಲೀಸ್ ಸಿಬ್ಬಂದಿ, ನಗರ ಸ್ಥಳೀಯ ಸಂಸ್ಥೆಗಳ  ಹೆಲ್ತ್ ಇನ್ಸಪೆಕ್ಟರ್ , ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತ್‍ನ ಕಾರ್ಯದರ್ಶಿಗಳು, ನಗರ ಸ್ಥಳೀಯ ಸಂಸ್ಥೆಗಳ ಬಿಲ್ ಕಲೆಕ್ಟರ್‍ಗಳನ್ನು ಅಧಿಕೃತವಾಗಿ ನಿಯೋಜಿಸಲಾಗಿರುತ್ತದೆ.

    ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಹಾಗೂ ದೈಹಿಕ ಅಂತರವನ್ನು ಕಾಪಾಡಿಕೊಳ್ಳಬೇಕು. ಇಲ್ಲವಾದಲ್ಲಿ ಈ ಆವರಣಗಳ ಮಾಲಿಕರು ಕೆಳಕಂಡಂತೆ ಜವಾಬ್ದಾರರಾಗಿರುತ್ತಾರೆ. ಹವಾನಿಯಂತ್ರಿತವಲ್ಲದ ಪಾರ್ಟಿ ಹಾಲ್‍ಗಳು, ಡಿಪಾರ್ಟ್‍ಮೆಂಟಲ್ ಸ್ಟೋರ್‍ಗಳಲ್ಲಿ ರೂ. 5,000 ದಂಡ, ಹವಾನಿಯಂತ್ರಿತ ಪಾರ್ಟಿ ಹಾಲ್‍ಗಳು, ಡಿಪಾರ್ಟ್‍ಮೆಂಟಲ್ ಸ್ಟೋರ್‍ಗಳು, ಬ್ರಾಂಡೆಡ್ ಶಾಪ್‍ಗಳು, ಶಾಪಿಂಗ್ ಮಾಲ್‍ಗಳಲ್ಲಿ ರೂ. 10,000 ದಂಡವನ್ನು ವಿಧಿಸಲು ಮುಖ್ಯ ಪೇದೆಯ ಶ್ರೇಣಿಗಿಂತ ಕೆಳಗಿನವರಲ್ಲದ ಪೊಲೀಸ್ ಸಿಬ್ಬಂದಿಗಳು, ನಗರ ಸ್ಥಳೀಯ ಸಂಸ್ಥೆಗಳ ಹೆಲ್ತ್ ಇನ್ಸ್‍ಪೆಕ್ಟರ್‍ಗಳು, ನಗರ ಸ್ಥಳೀಯ ಸಂಸ್ಥೆಗಳ ಬಿಲ್ ಕಲೆಕ್ಟರ್‍ಗಳು, ಗ್ರಾಮ ಪಂಚಾಯತ್‍ನ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತ್‍ನ ಕಾರ್ಯದರ್ಶಿಗಳನ್ನು ಅಧಿಕೃತವಾಗಿ ನಿಯೋಜಿಸಲಾಗಿರುತ್ತದೆ.

    ಸಮಾರಂಭಗಳಲ್ಲಿ ಭಾಗವಹಿಸಲು ನಿಗಧಿಪಡಿಸಿರುವ ಅತಿಥಿಗಳ ಸಂಖ್ಯೆಯ ಮಿತಿಯನ್ನು ಈ ಕೆಳಕಂಡಂತೆ ಜಾರಿಗೊಳಿಸಬೇಕು. ಮದುವೆ ಸಮಾರಂಭಗಳು – ತೆರೆದ ಸ್ಥಳಗಳಲ್ಲಿ 500 ಜನರು ಹಾಗೂ ಮುಚ್ಚಿದ ಸ್ಥಳಗಳಲ್ಲಿ 200 ಜನರು, ಜನ್ಮ ದಿನ ಹಾಗೂ ಇತರೆ ಆಚರಣೆಗಳು ತೆರೆದ ಸ್ಥಳಗಳಲ್ಲಿ 100 ಜನರು ಹಾಗೂ ಮುಚ್ಚಿದ ಸ್ಥಳಗಳಲ್ಲಿ 50 ಜನರು, ಮರಣ ಅಥವಾ ಅಂತ್ಯಕ್ರಿಯೆ ತೆರೆದ ಸ್ಥಳಗಳಲ್ಲಿ 100 ಜನರು ಹಾಗೂ ಮುಚ್ಚಿದ ಸ್ಥಳಗಳಲ್ಲಿ 50 ಜನರು, ಶವ ಸಂಸ್ಕಾರ ಅಥವಾ ಸಮಾಧಿ ಕ್ರಿಯೆ(ಹೂಳುವುದು), 50ಜನರು, ಇತರೆ ಆಚರಣೆ 100 ಜನರು, ಧಾರ್ಮಿಕ ಆಚರಣೆ ಹಾಗೂ ಕಾರ್ಯಗಳು, ತೆರೆದ ಸ್ಥಳಗಳಲ್ಲಿ 500 ಜನರು, ರಾಜಕೀಯ ಸಮಾವೇಶಗಳು ಅಥವಾ ಕಾರ್ಯಗಳು, ತೆರೆದ ಸ್ಥಳಗಳಲ್ಲಿ 500 ಜನರು, ಸಮಾರಂಭಗಳು ನಡೆಯುವ ಸ್ಥಳಗಳಲ್ಲಿ ಆವರಣಗಳ ಮಾಲಿಕರು, ಸಮಾರಂಭಗಳ ಆಯೋಜಕರು/ಸಂಘಟಕರು ಅಥವಾ ಅತಿಥೇಯರು ಮಾರ್ಗಸೂಚಿಗಳ ಉಲ್ಲಂಘನೆಯಾದಲ್ಲಿ ಸ್ವತಃ ಜವಾಬ್ದಾರರಾಗಿರುತ್ತಾರೆ.

    ತಾರಾ ಶ್ರೇಣಿಯ ಹೋಟೆಲ್‍ಗಳು, ಕನಿಷ್ಠ 500 ಜನರು ಸೇರುವ ಸಾಮರ್ಥ್ಯ ಹೊಂದಿರುವ ಮದುವೆ ಸಭಾಂಗಣ/ಛತ್ರಗಳು ಹಾಗೂ ಕನ್ವೆನ್ಶನ್ ಹಾಲ್‍ಗಳು ಅಥವಾ ಇಂತಹ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ನಿಯಮಗಳ ಉಲ್ಲಂಘನೆಯಾದಲ್ಲಿ ರೂ. 10,000 ಹಾಗೂ ಸಾರ್ವಜನಿಕ ಸಮಾರಂಭಗಳು ಅಥವಾ ರಾಲಿಗಳು ಅಥವಾ ಆಚರಣೆಗಳ ಆಯೋಜಕರಿಗೆ ರೂ. 10,000 ದಂಡ ವಿಧಿಸಲಾಗುವುದು.
    ಮದುವೆ, ಜನ್ಮದಿನ ಮುಂತಾದ ಖಾಸಗಿ ಕಾರ್ಯಕ್ರಮಗಳಲ್ಲಿ ಕೋವಿಡ್ ಸಮುಚಿತ ವರ್ತನೆ ಪಾಲನೆಯಾಗುತ್ತಿರುವುದನ್ನು ಖಚಿತಪಡಿಸಿಕೊಳ್ಳಲು ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಯುಕ್ತರು, ಮಂಗಳೂರು ಮಹಾನಗರ ಪಾಲಿಕೆ, ತಾಲೂಕು ಹಂತದಲ್ಲಿ ಸಂಬಂಧಪಟ್ಟ ತಹಶೀಲ್ದಾರರುಗಳು, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಂಬಂಧಪಟ್ಟ ನಗರ ಸಂಸ್ಥೆಗಳ ಮುಖ್ಯಾಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಹಾಗೂ ಮಾರ್ಗಸೂಚಿಗಳ ಉಲ್ಲಂಘನೆಯಾದಲ್ಲಿ ಸೂಚಿಸಿದ ಅಧಿಕಾರಿಗಳು ದಂಡ ವಿಧಿಸಲು ಕ್ರಮಕೈಗೊಳ್ಳಬೇಕು.
    ಈ ಆದೇಶವನ್ನು ಯಾವುದೇ ವ್ಯಕ್ತಿಗಳು ಉಲ್ಲಂಘಿಸಿದ್ದಲ್ಲಿ ಅಂತಹವರ ವಿರುದ್ದ ವಿಪತ್ತು ನಿರ್ವಹಣಾ ಕಾಯ್ದೆ-2005ರ ಸೆಕ್ಷನ್ 51 ರಿಂದ 60ರ ಅನ್ವಯ, ಐಪಿಸಿ ಸೆಕ್ಷನ್ 188 ರಂತೆ ಹಾಗೂ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ 2020ರ ಸೆಕ್ಷನ್ 4,5 ಮತ್ತು 10 ರಂತೆ ಕ್ರಮ ಜರಗಿಸಲಾಗುವುದು.

    Share Information
    Advertisement
    Click to comment

    You must be logged in to post a comment Login

    Leave a Reply