Connect with us

LATEST NEWS

ಕಾಸರಗೋಡಿನಿಂದ ಮಂಗಳೂರಿಗೆ ಬರಲು ಕೋವಿಡ್ ನೆಗೆಟಿವ್ ವರದಿ ಕಡ್ಡಾಯ

ಮಂಗಳೂರು ಮಾರ್ಚ್ 20: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಭೀತಿ ಹಿನ್ನಲೆ ಈಗಾಗಲೇ ರಾಜ್ಯದ ಎಲ್ಲಾ ಗಡಿ ಭಾಗಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಲು ರಾಜ್ಯ ಸರಕಾರ ನಿರ್ಧರಿಸಿದ್ದು, ಇನ್ನು ದಕ್ಷಿಣಕನ್ನಜ ಜಿಲ್ಲೆಗೆ ತಲಪಾಡಿ ಗಡಿ ಮೂಲಕ ಆಗಮಿಸುವವರ ಸಂಖ್ಯೆ ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲೆಗೆ ಪ್ರವೇಶಿಸುವ ಕಾಸರಗೋಡು ಜಿಲ್ಲೆಯವರು ಹಾಗೂ ಕೇರಳದ ಇತರ ಜಿಲ್ಲೆಯವರು ಕೋವಿಡ್ ನೆಗೆಟಿವ್ ವರದಿ ಹೊಂದಿರಬೇಕೆಂದು ಜಿಲ್ಲಾಡಳಿತ ಆದೇಶಿಸಿದೆ.


ಗಡಿ ಭಾಗದ ಜನತೆಗೆ ತೊಂದರೆಯಾಗುತ್ತದೆ ಎನ್ನುವ ಕಾರಣದಿಂದಾಗಿ ಕಳೆದ ತಿಂಗಳು ಜಾರಿಗೆ ತಂದಿದ್ದ ಕಡ್ಡಾಯ ನೆಟಿವ್ ವರದಿ ಹೊಂದಿರುವ ಆದೇಶವನ್ನು ಮುಂದೂಡಲಾಗಿತ್ತು. ಅಲ್ಲದೆ, ಪ್ರತಿಯೊಬ್ಬರು ಜಿಲ್ಲೆಗೆ ಆಗಮಿಸುವವರು ನೆಗೆಟಿವ್ ವರದಿ ಹೊಂದಿರಬೇಕೆಂದು ಆದೇಶ ನೀಡಿದ್ದರು. ಇದೀಗ ಎರಡು ವಾರಗಳ ಕಾಲಾವಕಾಶ ನೀಡಿದ ಬಳಿಕ ನೆಗೆಟಿವ್ ವರದಿ ಕಡ್ಡಾಯಗೊಳಿಸಲಾಗಿದೆ. ಕೇರಳದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿಯಮವನ್ನು ಮತ್ತೆ ಜಾರಿಗೆ ತರಲಾಗಿದೆ.


ಶುಕ್ರವಾರದಂದು ಕೋವಿಡ್ ನೆಗೆಟಿವ್ ವರದಿ ಪರೀಕ್ಷಿಸುವ ಸಂದರ್ಭದಲ್ಲಿ ಗಡಿಭಾಗದ ಜನರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನೆಲೆ ಶುಕ್ರವಾರದಂದು ವಿನಾಯಿತಿ ನೀಡಲಾಗಿತ್ತು. ಆದರೆ, ಶನಿವಾರದಿಂದ ಕಟ್ಟುನಿಟ್ಟಾಗಿ ನಿಯಮ ಜಾರಿಗೆ ತರಲಾಗುವುದೆಂದು ಆರೋಗ್ಯಾಧಿಕಾರಿ ಹಾಗೂ ದ.ಕ. ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *