LATEST NEWS
ಸರಕಾರದ ಮಾರ್ಗಸೂಚಿ ಉಲ್ಲಂಘಿಸಿ ಗಣೇಶ ವಿಗ್ರಹ ವಿಸರ್ಜನೆ – ಕಣ್ಮುಚ್ಚಿ ಕುಳಿತ ಜಿಲ್ಲಾಡಳಿತ

ಮಂಗಳೂರು ಅಗಸ್ಟ್ 24: ಗಣೇಶ ಚತುರ್ಥಿಯನ್ನು ಆಚರಣೆ ಮಾಡಲು ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿದ್ರೂ ಮಂಗಳೂರಿನ ಸೋಮೇಶ್ವರದಲ್ಲಿ ನಿಯಮ ಉಲ್ಲಂಘಿಸಿ ಗಣೇಶ ವಿಸರ್ಜನೆ ಮಾಡಲಾಗಿದೆ.
ಸರ್ಕಾರದ ಮಾರ್ಗಸೂಚಿ ಪ್ರಕಾರ ಹೆಚ್ಚಿನ ಜನ ಸೇರಬಾರದೆಂದು ನಿಯಮ ಇದ್ದರೂ ಉಳ್ಳಾಲ ಸಮೀಪದ ಸೋಮೇಶ್ವರ ಕಡಲ ತೀರದಲ್ಲಿ ಗಣೇಶ ವಿಸರ್ಜನೆ ವೇಳೆ ನೂರಾರು ಸಂಖ್ಯೆಯಲ್ಲಿ ಜನ ಸೇರಿದ್ದರು.

ಯಾವುದೇ ಸಾಮಾಜಿಕ ಅಂತರವಿಲ್ಲದೆ ಕೋವಿಡ್ ನಿಯಮವನ್ನು ಹಾಗೂ ಸರ್ಕಾರ ಮಾರ್ಗಸೂಚಿಯನ್ನು ಸಂಪೂರ್ಣವಾಗಿ ಉಲ್ಲಂಘಿಸಿ ಸಮುದ್ರದಲ್ಲಿ ಗಣೇಶನ ವಿಸರ್ಜನೆ ಮಾಡಲಾಗಿದೆ.
ಹಗಲಿನಲ್ಲೇ ಇಷ್ಟೊಂದು ಸಂಖ್ಯೆಯಲ್ಲಿ ಜನ ಸೇರಿ ನಿಯಮ ಉಲ್ಲಂಘನೆ ಮಾಡಿದ್ರೂ ಸ್ಥಳೀಯ ಪೊಲೀಸರು ಯಾಕೆ ಕ್ರಮಕೈಗೊಂಡಿಲ್ಲ ಅನ್ನೋ ಆಕ್ರೋಶ ವ್ಯಕ್ತವಾಗಿದೆ.