DAKSHINA KANNADA
ಕೇರಳ ಗಡಿ ಭಾಗದಲ್ಲಿ ಮತ್ತೆ ಕೋವಿಡ್ ತಪಾಸಣೆ , ನೆಗೆಟಿವ್ ವರದಿ ಇದ್ದವರಿಗೆ ಮಾತ್ರ ಕರ್ನಾಟಕ ಪ್ರವೇಕ್ಕೆ ಅವಕಾಶ: ಕೇರಳಿಗರಿಂದ ಪ್ರತಿಭಟನೆ
ಮಂಗಳೂರು, ಫೆಬ್ರವರಿ 22: ರಾಜ್ಯದಲ್ಲಿ ಕೊರೊನ ಸೋಕು ಹೆಚ್ಚುತ್ತಿರುವುದರಿಂದ ಕೇರಳ ಗಡಿ ಪ್ರದೇಶಕ್ಕೆ ನಿರ್ಬಂಧ ವಿಧಿಸಿದಕ್ಕೆ ಭಾರಿ ವಿರೋಧ ವ್ಯಕ್ತವಾಗಿದೆ.
ಕರ್ನಾಟಕ ಹಾಗು ಕೇರಳ ಗಡಿ ಪ್ರದೇಶವಾದ ತಲಪಾಡಿಯ ಪ್ರವೇಶಕ್ಕೆ ಕೋವಿಡ್ ನೆಗೆಟಿವ್ ಪ್ರಮಾಣ ಪತ್ರವಿದ್ದರೆ ಮಾತ್ರ ಪ್ರವೇಶಕ್ಕೆ ಅವಕಾಶ ವೆಂದು ಜಿಲ್ಲಾಧಿಕಾರಿ ಆದೇಶಿಸಿದ್ದರು. ಈ ಆದೇಶಕ್ಕೆ ಕೇರಳ ಗಡಿ ಪ್ರದೇಶದ ಸಾರ್ವಜನಿಕರಿಂದ ಭಾರಿ ವಿರೋಧ ವ್ಯಕ್ತವಾಗಿದ್ದು, ಇಂದು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಕೇರಳ ಪೊಲೀಸರು ಪ್ರತಿಭಟನಾಕಾರರ ಜೊತೆ ಸಂಧಾನ ನಡೆಸಿ ಮಂಗಳೂರಿನಿಂದ ಕಾಸರಗೋಡುಗೆ ವಾಹನಗಳ ಸಂಚಾರಕ್ಕೆ ಅವಕಾಶ ನೀಡಿದ್ದಾರೆ. ಇಂದು ಸಂಜೆಯೊಳಗೆ ನಿರ್ಧಾರ ಬದಲಿಸಲು ಗಡುವು ನೀಡಿದ ಪ್ರತಿಭಟನಾಕಾರರು, ಕರ್ನಾಟಕ ಪ್ರವೇಶಕ್ಕೆ ನಿರ್ಬಂಧ ಮುಂದುವರಿದರೆ ಮತ್ತೆ ರಸ್ತೆ ತಡೆ ನಡೆಸುವ ಎಚ್ಚರಿಕೆ ನೀಡಿದ್ದಾರೆ.
Video: