KARNATAKA
ಇನ್ನು ಮುಂದೆ ಭಾನುವಾರ ಕೋವಿಡ್ ಲಸಿಕೆ ಸಿಗೋದಿಲ್ಲ!

ಬೆಂಗಳೂರು: : ಕೋವಿಡ್ ಲಸಿಕಾ ಅಭಿಯಾನದಲ್ಲಿ ನಿರತರಾಗಿರುವ ಸಿಬ್ಬಂದಿ ಇನ್ನು ಮುಂದೆ ಭಾನುವಾರ ವಿರಾಮ ಪಡೆಯುವಂತೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕಿ ಅರುಂಧತಿ ಚಂದ್ರಶೇಖರ್ ಸೂಚಿಸಿದ್ದಾರೆ. ಈ ಹಿನ್ನಲೆ ರಾಜ್ಯದಲ್ಲಿ ಇನ್ಮುಂದೆ ಭಾನುವಾರ ಕೊರೊನಾ ಲಸಿಕೆ ಹಾಕದಿರಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ಧರಿಸಿದೆ.
ಯಾವುದೇ ರಜೆ ಇಲ್ಲದೇ, ನಿರಂತರವಾಗಿ ಆರೋಗ್ಯ ಸಿಬ್ಬಂದಿ ಕೆಲಸ ಮಾಡ್ತಾ ಇದ್ದರು. ಹೀಗಾಗಿ ಹೀಗಾಗಿ ರಾಜ್ಯದಲ್ಲಿ ಆರೋಗ್ಯ ಸಿಬ್ಬಂದಿಗೆ ಭಾನುವಾರ ರಜೆ ನೀಡಲು ಇಲಾಖೆ ಚಿಂತಿಸಿದೆ. ಭಾನುವಾರ ಹೊರತುಪಡಿಸಿ ಉಳಿದ 6 ದಿನ ಲಸಿಕೆ ನೀಡಲಾಗುತ್ತೆ. ಇನ್ಮುಂದೆ ಭಾನುವಾರ ಕೊರೊನಾ ಲಸಿಕೆ ಸಿಗಲ್ಲ ಎಂದು ಇಲಾಖೆ ತಿಳಿಸಿದೆ.
