Connect with us

    LATEST NEWS

    ಉಡುಪಿ – ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಮುನ್ನೆಚ್ಚರಿಕೆ ಡೋಸ್ ಲಸಿಕಾ ಶಿಬಿರ

    ಉಡುಪಿ, ಜನವರಿ 22: ಕೋವಿಡ್-19 ನಾಲ್ಕನೇ ಅಲೆಯ ತೀವ್ರತೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಜನವರಿ 23 ರಂದು ಸಾರ್ವಜನಿಕರಿಗೆ ಜಿಲ್ಲೆಯ ಎಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಮತ್ತು ಪದವಿ ವಿದ್ಯಾರ್ಥಿಗಳಿಗೆ ಪದವಿ ಕಾಲೇಜುಗಳಲ್ಲಿ
    ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕಾ ಮೇಳವನ್ನು ಆಯೋಜಿಸಲಾಗಿದೆ.

    ಕೋವಿಶೀಲ್ಡ್ ಪ್ರಥಮ ಡೋಸ್ ಲಸಿಕೆ ಪಡೆದು 84 ದಿನಗಳು ಮೀರಿದವರು 2 ನೇ ಡೋಸ್ ಕೋವಿಶೀಲ್ಡ್ ಲಸಿಕೆಯನ್ನು ಹಾಗೂ ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರು 2ನೇ ಡೋಸ್ ಕೋವ್ಯಾಕ್ಸಿನ್ ಲಸಿಕೆ
    ಪಡೆಯಬಹುದಾಗಿದೆ. 18 ವರ್ಷ ಮೇಲ್ಪಟ್ಟವರಲ್ಲಿ 2ನೇ ಡೋಸ್ ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್ ಲಸಿಕೆ ಪಡೆದು 26 ವಾರ (6 ತಿಂಗಳು) ಪೂರೈಸಿದವರಿಗೆ ಕೋವಿಡ್ ಮುನ್ನೆಚ್ಚರಿಕೆ ಲಸಿಕಾ ಡೋಸ್ (ಬೂಸ್ಟರ್ ಡೋಸ್) ನೀಡಲಾಗುವುದು.

    ಸಾರ್ವಜನಿಕರು ಹತ್ತಿರದ ಸರಕಾರಿ ಆಸ್ಪತ್ರೆಯನ್ನು ಸಂಪರ್ಕಿಸಿ, ಲಸಿಕಾಕರಣವನ್ನು ಖಚಿತಪಡಿಸಿಕೊಂಡು, ಲಸಿಕೆಯನ್ನು ನಿಗಧಿಪಡಿಸಿಕೊಂಡು ಲಸಿಕೆ ಪಡೆಯುವಂತೆ ಹಾಗೂ ಪದವಿ ವಿದ್ಯಾರ್ಥಿಗಳು ಕಾಲೇಜು ಮುಖ್ಯಸ್ಥರನ್ನು ಸಂಪರ್ಕಿಸಿ, ಲಸಿಕಾ
    ಶಿಬಿರವನ್ನು ಖಚಿತಪಡಿಸಿಕೊಂಡು ಲಸಿಕೆ ಪಡೆಯಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

     

    Share Information
    Advertisement
    Click to comment

    You must be logged in to post a comment Login

    Leave a Reply