LATEST NEWS
ಕಾರಿನಲ್ಲಿ ದನದ ಮಾಂಸ ಸಾಗಾಟ – ಇಬ್ಬರು ಪೊಲೀಸ್ ವಶಕ್ಕೆ

ಉಡುಪಿ ಮಾರ್ಚ್ 14: ಕಾರಿನಲ್ಲಿ ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಭಟ್ಕಳದ ಸೈಯದ್ ಮೊಸ್ಸಿನ್ ಲಂಕಾ (52), ಇಷ್ತಿಯಾಕ್ ಅಹಮ್ಮದ್ ಇಕ್ಕೇರಿ (41) ಎಂದು ಗುರುತಿಸಲಾಗಿದೆ.

ಆರೋಪಿಗಳು ಕಾರಿನಲ್ಲಿ ಮೀನು ತುಂಬುವ ಬಾಕ್ಸ್ ನಲ್ಲಿ ದನದ ಮಾಂಸ ತುಂಬಿಸಿಕೊಂಡು ಭಟ್ಕಳ ಕಡೆ ತೆರಳುತ್ತಿದ್ದರು ಎಂದು ಆರೋಪಿಸಲಾಗಿದೆ. ಪೊಲೀಸ್ ಶೋಧದ ವೇಳೆ ಕಾರಿನಲ್ಲಿ ಮೂರು ಪ್ಲಾಸ್ಟಿಕ್ ಚೀಲಗಳಲ್ಲಿ 150 ಕೆ.ಜಿ ಮಾಂಸ ಪತ್ತೆಯಾಗಿದೆ. ವಶಕ್ಕೆ ಪಡೆದ ಮಾಂಸದ ಅಂದಾಜು ಮೌಲ್ಯ 40,000 ರೂ. ಆಗಿದೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.