Connect with us

BELTHANGADI

ಅಕ್ರಮ ಗೋಸಾಗಾಟ ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ ಜೂನ್ 25: ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗೇಟ್ ಬಳಿ ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ಮೂವರನ್ನು ಬಂಧಿಸುವಲ್ಲಿ ಧರ್ಮಸ್ಥಳ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ನರೇಶ್, ಮೊಹಮ್ಮದ್ ಅಜರುದ್ದೀನ್ ಬಿನ್ ಅಬ್ದುಲ್ ರಹಿಮಾನ್ ಮತ್ತು ಮಹಮ್ಮದ್ ಹಫೀಜ್ ಬಿನ್ ಮಹಮ್ಮದ್ ಇಬ್ರಾಹಿಂ ಎಂದು ಗುರುತಿಸಲಾಗಿದೆ.

ಸಾಂಧರ್ಬಿಕ ಚಿತ್ರ

ಇಂದು ಬೆಳಿಗ್ಗೆ ಧರ್ಮಸ್ಥಳ ಪೊಲೀಸ್ ಠಾಣಾ ಉಪನಿರೀಕ್ಷಕ ಪವನ್ ಕುಮಾರ್ ನಾಯಕ್ ಹಾಗೂ ಸಿಬ್ಬಂದಿಗಳು ಚಾರ್ಮಾಡಿ ಗೇಟ್ ಬಳಿ ವಾಹನ ತಪಾಸಣೆ ಮಾಡುತ್ತಿದ್ದರು. ಈ ವೇಳೆ ಚಿಕ್ಕಮಗಳೂರಿನಿಂದ ಮಂಗಳೂರು ಕಡೆಗೆ ಅನುಮಾನಸ್ಪದವಾಗಿ ಬರುತ್ತಿದ್ದ ಲಾರಿಯನ್ನು ತಪಾಸಣೆ ಮಾಡಿದಾಗ ಯಾವುದೇ ದಾಖಲೆಗಳಿಲ್ಲದೆ 11 ಗೋವುಗಳನ್ನು ಸಾಗಾಟ ಮಾಡುತ್ತಿರುವುದು ತಿಳಿದು ಬಂದಿದೆ. ತಕ್ಷಣ ಲಾರಿ ಚಾಲಕ ಸೇರಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಈ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Facebook Comments

comments