Connect with us

DAKSHINA KANNADA

ಮರವೂರು ಸೇತುವೆಯಲ್ಲಿ ಬಿರುಕು; ಮಂಗಳೂರು ಏರ್ಪೋರ್ಟ್‌ಗೆ ಸಂಪರ್ಕ ಕಡಿತ

ಮಂಗಳೂರು, ಜೂನ್ 15: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಪರ್ಕಿಸುವ ಮರವೂರು ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ರಸ್ತೆ ಸಂಚಾರ ಸ್ಥಗಿತಗೊಳಿಸಲಾಗಿದೆ.

ಕರಾವಳಿಯಲ್ಲಿ ಭಾರಿ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಸೇತುವೆಯ ಪಿಲ್ಲರ್ ಕುಸಿದಿದೆ. ಇದರಿಂದಾಗಿ ಮರವೂರು ಸೇತುವೆಯ ಒಂದು ಕಡೆ ಬಿರುಕು ಉಂಟಾಗಿದ್ದು. ರಾತ್ರಿ 3 ಗಂಟೆಗೆ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಶಶಿಕುಮಾರ್ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡ ಪರಿಣಾಮ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗುವ ಈ ರಸ್ತೆ ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದರು.

ವಿಮಾನ‌ ನಿಲ್ದಾಣಕ್ಕೆ ಮಂಗಳೂರಿನಿಂದ ಹೋಗುವವರು ನಂತೂರು, ವಾಮಂಜೂರು, ಗುರುಪುರ, ಕೈಕಂಬ, ಬಜ್ಪೆ ರಸ್ತೆಯಲ್ಲಿ, ಉಡುಪಿ ಕಡೆಯಿಂದ ಬರುವವರು ಮುಲ್ಕಿ, ಕಟೀಲು, ಬಜ್ಪೆ ಮೂಲಕ ಹೋಗಬಹುದು ಎಂದು ತಿಳಿಸಿದರು.

Video:

Share Information
Continue Reading
Advertisement
Click to comment

Leave a Reply

Your email address will not be published. Required fields are marked *