LATEST NEWS
ಮದುವೆ ರಾಜಕೀಯ ಸಮಾರಂಭ ಸಮಾವೇಶಗಳಲ್ಲಿ ಪಟಾಕಿ ಬ್ಯಾನ್ -ಸಿಎಂ ಸಿದ್ದರಾಮಯ್ಯ
ಬೆಂಗಳೂರು ಅಕ್ಟೋಬರ್ 10: ರಾಜಕೀಯ ಸಮಾರಂಭ, ಸಮಾವೇಶ, ಕಾರ್ಯಕ್ರಮಗಳಲ್ಲಿ ಪಟಾಕಿ ಬ್ಯಾನ್ ಮಾಡಲಾಗಿದೆ. ಮದುವೆ, ಗಣೇಶ ಉತ್ಸವ, ಎಲ್ಲ ಮೆರವಣಿಗೆಗಳಲ್ಲಿ ಇನ್ಮುಂದೆ ಪಟಾಕಿ ನಿಷೇಧ ವಿಧಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಅತ್ತಿಬೆಲೆ ಪಟಾಕಿ ದುರಂತದ ಬೆನ್ನಲ್ಲೇ ರಾಜ್ಯಸರಾಕರ ಹೊಸ ನಿಯಮ ಜಾರಿ ಮಾಡಿದ್ದು, ರಾಜ್ಯದಲ್ಲಿ ಪಟಾಕಿ ಮಾರಾಟಕ್ಕೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮ ಕುರಿತು ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಹಸಿರು ಪಟಾಕಿಗಳಿಗೆ ಮಾತ್ರ ಅವಕಾಶ. ಉಳಿದ ಪಟಾಕಿಗಳಿಗೆ ನಿಷೇಧ ಹೇರಲಾಗಿದೆ ಎಂದು ತಿಳಿಸಿದರು. ರಾಜಕೀಯ ಸಮಾರಂಭ, ಸಮಾವೇಶ, ಕಾರ್ಯಕ್ರಮಗಳಲ್ಲಿ ಪಟಾಕಿ ಬ್ಯಾನ್ ಮಾಡಲಾಗಿದೆ. ಮದುವೆ, ಗಣೇಶ ಉತ್ಸವ, ಎಲ್ಲ ಮೆರವಣಿಗೆಗಳಲ್ಲಿ ಇನ್ಮುಂದೆ ಪಟಾಕಿ ನಿಷೇಧ ವಿಧಿಸಲಾಗಿದೆ. ಆದರೆ ದೀಪಾವಳಿಗೆ ಪಟಾಕಿ ನಿಷೇಧ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಹಸಿರು ಪಟಾಕಿ ನಿಯಾಮವಳಿಗಳಿಗೆ ವಿರುದ್ಧವಾಗಿ ಅಂಗಡಿಗಳಿದ್ದರೆ ಕ್ರಮ ಕೈಗೊಳ್ಳಲಾಗುವುದು. ಪರಿಶೀಲನೆ ಮಾಡಿ ಕ್ರಮಕ್ಕೆ ಸೂಚಿಸಿದ್ದೇವೆ. ಇನ್ಮುಂದೆ ಪಟಾಕಿ ಅಂಗಡಿಗಳಿಗೆ ಲೈಸೆನ್ಸ್‌ಗಳಿಗೆ ಸುಪ್ರೀಂ ಕೋರ್ಟ್ ಆದೇಶದ ಪ್ರಕಾರವೇ ಲೈಸೆನ್ಸ್ ಕಡ್ಡಾಯ ಮಾಡಲಾಗಿದೆ. ಕಟ್ಟುನಿಟ್ಟಾಗಿ ಕ್ರಮ ತೆಗೆದುಕೊಳ್ಳಬೇಕು ಎಂದರು.