LATEST NEWS
ಬಜ್ಪೆ – ವಿಮಾನ ನಿಲ್ದಾಣದ ಬಳಿ ಪಲ್ಟಿಯಾದ ಕ್ರೇನ್ – ಅಪರೇಟರ್ ಸಾವು
ಮಂಗಳೂರು ಡಿಸೆಂಬರ್ 18: ಮಂಗಳೂರು ವಿಮಾನ ನಿಲ್ದಾಣದ ನಿರ್ಗಮನ ದ್ವಾರದ ಬಳಿ ಕಾರ್ಯನಿರ್ವಹಿಸುತ್ತಿದ್ದ ಕ್ರೇನ್ ಪಲ್ಟಿಯಾಗಿ ಕ್ರೇನ್ ಆಪರೇಟರ್ ಪ್ರಾಣ ಕಳೆದುಕೊಂಡ ಘಟನೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತರನ್ನು ಉತ್ತರ ಪ್ರದೇಶದ ಕ್ರೇನ್ ಆಪರೇಟರ್ ಅರುಣ್ ಕುಮಾರ್ ಜಾಧವ್ ಎಂದು ಗುರುತಿಸಲಾಗಿದೆ. ಕ್ರೇನ್ ಅದ್ಯಪಾಡಿಯಿಂದ ಕೆಂಜಾರ್ ಜಂಕ್ಷನ್ ಕಡೆಗೆ ವಿಮಾನ ನಿಲ್ದಾಣದ ನಿರ್ಗಮನ ಮಾರ್ಗವಾಗಿ ತೆರಳುತ್ತಿತ್ತು. ರಸ್ತೆಯ ಇಳಿಜಾರಿನ ಭಾಗದಲ್ಲಿ ವಾಹನ ನಿಯಂತ್ರಣ ಕಳೆದುಕೊಂಡು 20 ಅಡಿ ಆಳದ ಕಂದಕಕ್ಕೆ ಉರುಳಿದೆ ಎನ್ನಲಾಗಿದೆ. ಕ್ರೇನ್ ಅಡಿಗೆ ಸಿಲುಕಿಕೊಂಡ ಆಪರೇಟರ್ ಅನ್ನು ಮೇಲೆಕ್ಕೆತ್ತಲು ಸುಮಾರು ಅರ್ಧ ತಾಸು ಕಾರ್ಯಾಚರಣೆ ಮಾಡಲಾಗಿದೆ. ಇನ್ನೊಂದು ಕ್ರೇನ್ ಮೂಲಕ ಮೇಲಕ್ಕೆತ್ತಿ ಅದರಡಿಗೆ ಸಿಲುಕಿಕೊಂಡ ಅಪರೇಟರ್ ಅನ್ನು ಮೇಲಕ್ಕೆತ್ತಿ ಆಸ್ಪತ್ರೆಗೆ ದಾಖಲಿಸಲಾಯಿತು.