LATEST NEWS
ಮಂಗಳೂರಿಗೆ ಆಗಮಿಸಿದ ಟೀ ಇಂಡಿಯಾ ಮಾಜಿ ಕಪ್ತಾನ ಎಂ.ಎಸ್ ಧೋನಿ

ಮಂಗಳೂರು ಜನವರಿ 07: ಕಾಸರಗೋಡಿನಲ್ಲಿ ನಡೆಯಲಿರುವ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಭಾರತ ತಂಡದ ಮಾಜಿ ನಾಯಕ ಎಮ್ ಎಸ್ ಧೋನಿ ಅವರು ಇಂದು ಮುಂಬೈನಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಮಂಗಳೂರಿಗೆ ಆಗಮಿಸಿದ ಅವರನ್ನು ಶಾಸಕ ಖಾದರ್ ಸಹೋದರ ಯು.ಟಿ ಇಫ್ತಿಕಾರ್ ಆತ್ಮೀಯವಾಗಿ ಬರಮಾಡಿಕೊಂಡು ಸ್ವಾಗತಿಸಿದರು. ವಿಮಾನ ನಿಲ್ದಾಣದಲ್ಲಿ ಧೋನಿಯವರನ್ನು ನೋಡಿ ಅಭಿಮಾನಿಗಳು ಸೆಲ್ಫಿಗಾಗಿ ಮುಗಿ ಬಿದ್ದರು.

ಇಂದು ಸಂಜೆ ಕಾಸರಗೋಡಿನಲ್ಲಿ ಧೋನಿ ಅವರ ಸ್ನೇಹಿತನಾದ ಡಾ. ಶಾಜೀರ್ ಗಫಾರ್ ಅವರ ತಂದೆ ಪ್ರೊ.ಕೆ ಅಬ್ದುಲ್ ಗಫಾರ್ ಅವರ ಆತ್ಮಕಥನ ಬಿಡುಗಡೆ ಸಮಾರಂಭದಲ್ಲಿ ಧೋನಿ ಭಾಗಿಯಾಗಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.