LATEST NEWS
ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು
ಮುಂಬೈ ಡಿಸೆಂಬರ್ 23: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಸ್ಥಿತಿ ಗಂಭೀರ ಎಂದು ವರದಿಯಾಗಿದೆ.
ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಕಾಂಬ್ಳಿ ಸ್ಥಿತಿ ಗಂಭೀರವಾಗಿದ್ದು, ಇಂದು ಅವರು ಠಾಣೆಯ ಆಕೃತಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.
ಸದ್ಯ ವೈದ್ಯರ ಮೇಲ್ವಿಚಾರಣೆಯಲ್ಲಿರುವ ವಿನೋದ್ ಕಾಂಬ್ಳಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಎಂತಲೂ ಹೇಳಲಾಗುತ್ತಿದೆ.
ಕುಡಿತದ ಚಟದಿಂದಾಗಿ ವಿನೋದ್ ಕಾಂಬ್ಳಿ ತನ್ನ ಆರೋಗ್ಯವನ್ನು ಕೆಡಿಸಿಕೊಂಡಿದ್ದಾರೆ. ಅವರ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟಿದೆ ಎಂದು ಅವರು ಇತ್ತೀಚೆಗೆ ನೀಡಿದ್ದ ಸಂದರ್ಶನ ಒಂದರಲ್ಲಿ ಹೇಳಿದ್ದರು.