LATEST NEWS
ಬಿಎಸ್ ವೈ ವಿರುದ್ದ ಕ್ರಿಮಿನಲ್ ಕೇಸ್ ದಾಖಲಿಸಿದ ಕಾಂಗ್ರೇಸ್ ಮಹಿಳಾ ಕಾರ್ಪೋರೇಟರ್

ಬಿಎಸ್ ವೈ ವಿರುದ್ದ ಕ್ರಿಮಿನಲ್ ಕೇಸ್ ದಾಖಲಿಸಿದ ಕಾಂಗ್ರೇಸ್ ಮಹಿಳಾ ಕಾರ್ಪೋರೇಟರ್
ಮಂಗಳೂರು ಎಪ್ರಿಲ್ 14: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ವಿರುದ್ದ ಮಂಗಳೂರಿನ ಮಹಿಳಾ ಕಾರ್ಪೋರೇಟರ್ ಒಬ್ಬರು ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ.
ಮಂಗಳೂರು ಮಹಾನಗರಪಾಲಿಕೆ ಸದಸ್ಯೆ, ಮಹಿಳಾ ಕಾಂಗ್ರೇಸ್ ಕಾರ್ಯದರ್ಶಿ ಪ್ರತಿಭಾ ಕುಳಾಯಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಸಹಿತ ಐವರ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ.

ಬಿಜೆಪಿ ಬೆಂಗಳೂರಿನಲ್ಲಿ ಬಿಡುಗಡೆ ಮಾಡಿದ ಕಾಂಗ್ರೇಸ್ ವಿರುದ್ದ ಚಾರ್ಜ್ ಶೀಟ್ ನಲ್ಲಿ ಪ್ರತಿಭಾ ಕುಳಾಯಿ ಅವರ ಪೋಟೋ ಬಳಸಿಕೊಂಡಿತ್ತು. ಈ ಹಿನ್ನಲೆಯಲ್ಲಿ ತನ್ನ ಭಾವಚಿತ್ರ ಹಾಗೂ ಹೆಸರು ಬಳಸಿ ನನಗೆ ಮಾನಸಿಕ ಹಿಂಸೆ ಹಾಗೂ ಮಾನಹಾನಿ ಮಾಡಿದ್ದಾರೆ ಎಂದು ಪ್ರತಿಭಾ ಕುಳಾಯಿ ಆರೋಪಿಸಿದ್ದರು.
ಈ ಹಿನ್ನಲೆಯಲ್ಲಿ ಮಂಗಳೂರಿನ ಜೆ.ಎಂ.ಎಫ್.ಸಿ 2ನೇ ನ್ಯಾಯಾಲಯದಲ್ಲಿ ಕೇಂದ್ರ ಸಚಿವ ರವಿಶಂಕರ ಪ್ರಸಾದ್ , ಬಿ.ಎಸ್ ಯಡಿಯೂರಪ್ಪ ಮತ್ತು ಶೋಭಾ ಕರಂದ್ಲಾಜೆ ಸೇರಿದಂತೆ ಐವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿದ್ದಾರೆ.
ಪ್ರಕರಣ ಎಪ್ರಿಲ್ 19 ರಂದು ನ್ಯಾಯಾಲಯದಲ್ಲಿ ವಿಚಾರಣೆಗೆ ಬರಲಿದೆ.