LATEST NEWS
ಜಿಲ್ಲಾಡಳಿತದ ಕಾರ್ಯವೈಖರಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಕ್ರಿಮಿನಲ್ ಪ್ರಕರಣ ದಾಖಲು
ಜಿಲ್ಲಾಡಳಿತದ ಕಾರ್ಯವೈಖರಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಕ್ರಿಮಿನಲ್ ಪ್ರಕರಣ ದಾಖಲು
ಮಂಗಳೂರು: ಕೊರೋನಾ ಸಂಬಂಧವಾಗಿ ಜಿಲ್ಲಾಡಳಿತದ ಕಾರ್ಯವೈಖರಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹೇಳಿಕೆಯನ್ನು ಪೋಸ್ಟ್ ಮಾಡಿದ್ದ ಮೆಲ್ವಿನ್ ಪಿಂಟೋ ಎಂಬಾತನ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ.
ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಜಿಲ್ಲಾಡಳಿತ, ಮಾರ್ಚ್ 28ರಂದು ವಾಟ್ಸಾಪ್ ಪೋಸ್ಟ್ ಮೂಲಕ ಜಿಲ್ಲಾಡಳಿತದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದು, ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಜಿಲ್ಲಾಡಳಿತದ ವಿರುದ್ಧ ಸುಳ್ಳು ಸುದ್ದಿಗಳನ್ನು ಹರಿದಾಡಿ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಸುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತೆ ಎಂದು ಎಚ್ಚರಿಸಿದೆ.
ಇನ್ನು ಜಿಲ್ಲೆಯಲ್ಲಿ ದಿನಸಿ ಸಾಮಾಗ್ರಿಗಳನ್ನು ದಾನ ಮಾಡಬಯಸುವವರಿಗೆ ಸ್ಮಾರ್ಟ್ ಸಿಟಿ ಬಿಲ್ಡಿಂಗ್‍ನಲ್ಲಿ ಸಂಗ್ರಹಣಾ ಕೇಂದ್ರವನ್ನು ಸ್ಥಾಪಿಸಲಾಗಿದ್ದು, ಸಾರ್ವಜನಿಕರು ನೆರವು ನೀಡಬಹುದು. ಅಕ್ಕಿ, ತೊಗರಿ ಬೇಳೆ, ದವಸ ಧಾನ್ಯ, ಸನ್‍ಫ್ಲವರ್ ಎಣ್ಣೆ, ಮಸಾಲೆ ಪ್ಯಾಕ್, ಸಾಂಬಾರು ಮಸಾಲೆ, ಉಪ್ಪಿನಕಾಯಿ, ತರಕಾರಿಗಳನ್ನು ತಲುಪಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.