UDUPI
ಕೊರೊನಾ ಪಾಸಿಟಿವ್ ವರದಿಯೊಂದಿಗೆ ಆಗಮಿಸಿದಲ್ಲಿ ಕ್ರಿಮಿನಲ್ ಮೊಕದ್ದಮೆ : ಜಿಲ್ಲಾಧಿಕಾರಿ ಜಿ.ಜಗದೀಶ್
ಉಡುಪಿ ಜುಲೈ 6 : ಜಿಲ್ಲೆಗೆ ವಿವಿಧ ರಾಜ್ಯಗಳಿಂದ ಆಗಮಿಸುತ್ತಿರುವ ಸಾರ್ವಜನಿಕರು, ಖಾಸಗಿ ಲ್ಯಾಬ್ ಗಳಲ್ಲಿ ನೀಡಿರುವ ತಮ್ಮ ಕೋವಿಡ್-19 ಪರೀಕ್ಷಾ ವರದಿ ಬರುವ ಮುನ್ನವೇ ಜಿಲ್ಲೆಗೆ ಆಗಮಿಸುತ್ತಿದ್ದು, ಜಿಲ್ಲೆಗೆ ಆಗಮಿಸಿದ ನಂತರ ಅವರ ವರದಿಯು ಪಾಸಿಟಿವ್ ಆಗಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಲ್ಲಿ, ಅಂತಹ ವ್ಯಕ್ತಿಗಳ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದಾಗಿ ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ ನೀಡಿದ್ದಾರೆ.
ಹೊರರಾಜ್ಯದಿಂದ ಬರುವ ವ್ಯಕ್ತಿಗಳು ತಮ್ಮ ಕೋವಿಡ್ 19 ಪರೀಕ್ಷಾ ವರದಿ ಬಂದ ನಂತರವೇ ಜಿಲ್ಲೆಗೆ ಬರಬೇಕು, ಖಾಸಗಿ ಲ್ಯಾಬ್ ಗಳೂ ಸಹ ಅಂತಹ ವ್ಯಕ್ತಿಗಳ ವರದಿಯನು ಸಂಬಂದಪಟ್ಟ ಜಿಲ್ಲಾಡಳಿತಕ್ಕೆ ತಿಳಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.
ಜಿಲ್ಲೆಯಲ್ಲಿ ಬಸ್ ಗಳಲ್ಲಿ ಸಾಮಾಜಿಕ ಅಂತರ ಪಾಲನೆಯಾಗದೇ ಕುರಿತು ತೀವ್ರ ಅಸಮಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ ಜಿ.ಜಗದೀಶ್, ಬಸ್ ಗಳ ವಿರುದ್ದ ಪ್ರಕರಣ ದಾಖಲಿಸದ ಪ್ರಾದೇಶಿಕ ಸಾರಿಗೆ ಅಧಿಕಾರಿಗೆ ನೋಟೀಶ್ ನೀಡುವಂತೆ ಸೂಚಿಸಿದರು.
ಎಲ್ಲಾ ತಹಸೀಳ್ದಾರ್ ಗಳು ಬಸ್ ಗಳಲ್ಲಿ ನಿಗಧಿತ ಸಂಖ್ಯೆಗಿಂತ ಹೆಚ್ಚಿನ ಪ್ರಯಾಣಿಕರಿದ್ದಲ್ಲಿ , ಹೆಚ್ಚುವರಿ ಪ್ರಯಾಣಿಕರನ್ನು ಕೆಳಗಿಳಿಸಿ, ಬಸ್ ನ ಚಾಲಕ ಮತ್ತು ಕಂಡಕ್ಟರ್ ವಿರುದ್ದ ಪ್ರಕರಣ ದಾಖಲಿಸುವಂತೆ ಹಾಗೂ ಹೆಚ್ಚವರಿ ಪ್ರಯಾಣಿಕರಿಗೆ ಆರ್.ಟಿ.ಓ ಮೂಲಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೂಚನೆ ನೀಡಿದರು. ಜಿಲ್ಲೆಯ ಎಲ್ಲಾ ಖಾಸಗಿ ಬಸ್ ಮಾಲೀಕರಿಗೆ ಮತ್ತು ಆರ್.ಟಿ.ಓ ಅಧಿಕಾರಿಗಳಿಗೆ ಈ ಹಿಂದೆಯೇ ಸಭೆ ನೆಡೆಸಿ, ಬಸ್ ಗಳಲ್ಲಿ ಸಾಮಾಜಿಕ ಅಂತರ ಪಾಲನೆಗೆ ಸೂಚನೆ ನೀಡಿದ್ದರೂ, ಸಹ ಇನ್ನೂ ಇದರ ಉಲ್ಲಂಘನೆ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.
Facebook Comments
You may like
ಯಾರಿಗೂ ವಂಚನೆ ಮಾಡಿಲ್ಲ – ಐ ವಿಲ್ ಕಮ್ ಬ್ಯಾಕ್ ಅಗೈನ್ – ಬಿ.ಆರ್ ಶೆಟ್ಟಿ
ಕೋಟ – ಬೈಕ್ ಗೆ ಕಾರು ಡಿಕ್ಕಿ ಸವಾರ ಸ್ಥಳದಲ್ಲೇ ಸಾವು
ಪೆಟ್ರೋಲ್ ಬೆಲೆ ಏರಿಕೆ ವಿರುದ್ದ ಉಡುಪಿಯಲ್ಲಿ ವಿಭಿನ್ನ ರೀತಿಯ ಪ್ರತಿಭಟನೆ
ಮಹಾರಾಷ್ಟ್ರದಲ್ಲಿ ಕರೊನಾ ಹಾವಳಿ : ಪೊಲೀಸರಿಗೆ ವರ್ಕ್ಫ್ರಮ್ ಹೋಮ್!
ಟೈಂ ಕೀಪಿಂಗ್ ವಿಚಾರದಲ್ಲಿ ಖಾಸಗಿ ಬಸ್ ಚಾಲಕರ ಹೊಡೆದಾಟ – ಬಸ್ ವಶಕ್ಕೆ
ಸಾಸ್ತಾನ ಟೋಲ್ ವಿನಾಯಿತಿ ನೀಡಲು ಒಪ್ಪದ ನವಯುಗ ಸಂಸ್ಥೆ – ಗರಂ ಆದ ಸಂಸದೆ ಶೋಭಾ ಕರಂದ್ಲಾಜೆ
You must be logged in to post a comment Login