Connect with us

LATEST NEWS

ಕ್ರೈಸ್ತ ಹಾಗೂ ಇಸ್ಲಾಂ ಧರ್ಮದ ಬಗ್ಗೆ ಅವಹೇಳನಕಾರಿ ಬರಹ ಕ್ರಮಕ್ಕೆ ಒತ್ತಾಯ

ಮಂಗಳೂರು ಸೆಪ್ಟೆಂಬರ್ 12: ಕ್ರೈಸ್ತ ಹಾಗೂ ಇಸ್ಲಾಂ ಧರ್ಮದ ಬಗ್ಗೆ ಅವಹೇಳನಕಾರಿ ಬರಹಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ ವ್ಯಕ್ತಿಯ ವಿರುದ್ಧ ಈ ಕೂಡಲೇ ಕ್ರಮ ಜರುಗಿಸಬೇಕೆಂದು ಒತ್ತಾಯ ಕೇಳಿಬರುತ್ತಿದೆ.

ಅಕ್ಷರ ಬೋಳಿಯಮಜಲ್ ಎಂಬವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಕ್ರೈಸ್ತ ಧರ್ಮದ ಹಾಗೂ ಯೇಸುಕ್ರಿಸ್ತರ ವಿರುದ್ಧ ತೀರಾ ಕೀಳು ಮಟ್ಟದ ಭಾಷೆ ಬಳಸಿ ಬರಹಗಳನ್ನು ಪ್ರಕಟಿಸಿದ್ದರು ಎಂದು ಹೇಳಲಾಗಿದೆ. ಅಲ್ಲದೆ ಇಸ್ಲಾಂ ಧರ್ಮದ ಬಗ್ಗೆಯೂ ಅವಹೇಳನಕಾರಿ ಬರಹ ಪ್ರಕಟಿಸಿದ್ದರು ಎಂದು ದೂರಲಾಗಿದೆ.

ಈ ಹಿನ್ನೆಲೆಯಲ್ಲಿ ಅಕ್ಷರ ಬೋಳಿಯಮಜಲ್ ಎಂಬವರನ್ನು ಬಂಧಿಸಿ ಕಠಿಣ ಕ್ರಮ ಜರುಗಿಸುವಂತೆ ವಿವಿಧ ಕ್ರೈಸ್ತ ಹಾಗೂ ಮುಸ್ಲಿಂ ಸಂಘಟನೆಗಳು ಒತ್ತಾಯಿಸಿವೆ.

ಜಿಲ್ಲಾ ಯುವಕಾಂಗ್ರೇಸ್ ನಿಂದ ಮನವಿ

ಈ ನಿಟ್ಟಿನಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ ನೇತೃತ್ವದಲ್ಲಿ ನಿಯೋಗ ಮಂಗಳೂರು ಪೊಲೀಸ್ ಕಮಿಷನರ್ ಟಿ.ಆರ್ ಸುರೇಶ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ. ಜಿಲ್ಲೆಯಲ್ಲಿ ಕೋಮು ಸೌಹಾರ್ದ ಕೆಡಿಸುವ ನಿಟ್ಟಿನಲ್ಲಿ ಅಕ್ಷರ್ ಬೋಳಿಮಜಲ್ ಯತ್ನಿಸುತ್ತಿದ್ದಾರೆ . ಆತನ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಅವರು ಪೊಲೀಸ್ ಇಲಾಖೆಯನ್ನು ಆಗ್ರಹಿಸಿದ್ದಾರೆ.

Advertisement
Click to comment

You must be logged in to post a comment Login

Leave a Reply