Connect with us

    DAKSHINA KANNADA

    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮೊಸಳೆ ಮರಿ ಪತ್ತೆ..ಆತಂಕದಲ್ಲಿ ಸ್ಥಳೀಯರು

    ಸುಳ್ಯ ಜೂನ್ 29: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಸಮೀಪದ ಪೆಟ್ರೋಲ್ ಬಂಕ್ ಸಮೀಪ ಮೊಸಳೆಯ ಮರಿಯೊಂದು ಪತ್ತೆಯಾಗಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಪೆಟ್ರೋಲ್ ಬಂಕ್ ನ ಅನತಿ ದೂರದಲ್ಲೇ ಕುಮಾರಧಾರಾ ನದಿ ಹರಿಯುತ್ತಿದ್ದು, ನದಿಯಿಂದಲೇ ಮೊಸಳೆ ಮರಿ ಪೆಟ್ರೋಲ್ ಬಂಕ್ ಬಳಿ ಬಂದಿರಬಹುದು ಎನ್ನುವ ಅನುಮಾನವಿದೆ.


    ಮಳೆಗಾಲದ ಸಂದರ್ಭದಲ್ಲಿ ಕುಮಾರಧಾರಾ ನದಿ ತುಂಬಿ ಹರಿಯಲಾರಂಭಿಸುತ್ತಿದ್ದು, ಇದರಿಂದಾಗಿ ನದಿಯಲ್ಲಿ ಇರುವ ಮೊಸಳೆಗಳು ದಡ ಸೇರುತ್ತಿದೆ. ಮರಿ ಪತ್ತೆಯಾದ ಹಿನ್ನಲೆಯ ಇನ್ನೂ ಹಲವು ಮೊಸಳೆಗಳು ದಡಕ್ಕೆ ಬಂದಿರುವ ಸಾಧ್ಯತೆಯಿರುವ ಕಾರಣಕ್ಕಾಗಿ ಸಾರ್ವಜನಿಕರಲ್ಲಿ ಇದೀಗ ಆತಂಕ ಮನೆಮಾಡಿದೆ.


    ಮೊಸಳೆ ಮರಿ ಗಮನಕ್ಕೆ ಬಂದ ತಕ್ಷಣವೇ ಸ್ಥಳೀಯರು ಈ ವಿಚಾರವನ್ನು ಅರಣ್ಯ ಇಲಾಖೆಯ ಗಮನಕ್ಕೆ ತಂದಿದ್ದಾರೆ. ಆದರೆ ಸಿಬ್ಬಂದಿಗಳು ಬರುವ ಸಂದರ್ಭದಲ್ಲಿ ಮೊಸಳೆ ಮರಿ ಕಾಣೆಯಾಗಿದ್ದು, ಇದೀಗ ಮೊಸಳೆಯನ್ನು ಹುಡುಕುವ ಪ್ರಯತ್ನ ನಡೆಸುತ್ತಿದ್ದಾರೆ. ಈ ಹಿಂದೆಯೂ ಕುಮಾರಧಾರಾ ನದಿಯಲ್ಲಿ ಮೊಸಳೆಗಳು ಇರುವ ಬಗ್ಗೆ ಸುದ್ದಿಗಳು ಹರಿದಾಡುತ್ತಿದ್ದು, ಇದೀಗ ಮೊಸಳೆಗಳ ಇರುವಿಕೆಗೆ ಸಾಕ್ಷಿಯೂ ದೊರೆತಂತಾಗಿದೆ. ಶಿರಾಡಿಘಾಟ್ ಅರಣ್ಯದಿಂದ ಹರಿದುಬರುವ ಕಾರಣಕ್ಕಾಗಿ ಕುಮಾರಧಾರಾ ನದಿಯಲ್ಲಿ ಮೊಸಳೆಗಳು ಹೆಚ್ಚಿನ ಸಂಖ್ಯೆಯಲ್ಲೂ ಇರುವ ಸಾಧ್ಯತೆಯ ಬಗ್ಗೆ ಸ್ಥಳೀಯರು ಅಭಿಪ್ರಾಯಪಡುತ್ತಾರೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *