LATEST NEWS
ರಷ್ಯಾ ಉಕ್ರೇನ್ ಯುದ್ದ ಕಾರ್ಮೋಡ – ಕಚ್ಚಾ ತೈಲ ಬೆಲೆ ಭಾರಿ ಏರಿಕೆ

ನವದೆಹಲಿ : ರಷ್ಯಾ-ಉಕ್ರೇನ್ ಬಿಕ್ಕಟ್ಟು ತೀವ್ರಗೊಂಡ ಹಿನ್ನಲೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಭಾರೀ ಏರಿಕೆ ಕಂಡಿದೆ. ಶೀಘ್ರದಲ್ಲೇ ಭಾರತದಲ್ಲಿ ತೈಲ ಬೆಲೆ ಗಗನಕ್ಕೇರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಸದ್ಯ ಕಚ್ಚಾ ತೈಲದ ಬೆಲೆ ಬ್ಯಾರಲ್‌ಗೆ 94.84( 7,165ರೂ.) ಡಾಲರ್‌ಗೆ ಏರಿಕೆಯಾಗಿದ್ದು, ಶೀಘ್ರವೇ 100 ಡಾಲರ್‌ಗೆ ಏರಿಕೆಯಾಗುವ ಸಾಧ್ಯತೆಯಿದೆ. ಸದ್ಯ ಭಾರತದಲ್ಲಿ ಲೀಟರ್‌ಗೆ 100 ರೂ. ಅಸುಪಾಸಿನಲ್ಲಿರುವ ಪೆಟ್ರೋಲ್ ದರ ತೈಲ ಬೆಲೆ 100 ಡಾಲರ್‌ಗೆ ಏರಿಕೆಯಾದರೆ ಭಾರೀ ಏರಿಕೆಯಾಗುವ ಸಾಧ್ಯತೆಯಿದೆ.

ತಿಂಗಳ ಅಂತ್ಯದ ವೇಳೆ 8 ವರ್ಷದ ಗರಿಷ್ಠವಾದ 100 ಡಾಲರ್ ತಲುಪುವ ಸಾಧ್ಯತೆ ಇದೆ. ಕೊರೊನಾ ಹೊಡೆತದಿಂದ ನಲುಗಿದ್ದ ದೇಶಗಳು ಈಗಷ್ಟೇ ಆರ್ಥಿಕತೆ ಚೇತರಿಕೆ ಕಾಣುತ್ತಿವೆ. ದರ ಏರಿಕೆಯಾದಲ್ಲಿ ಹಲವು ರಾಷ್ಟ್ರಗಳ ಆರ್ಥಿಕತೆಯ ಮೇಲೆ ಭಾರೀ ಪೆಟ್ಟು ಬೀಳುವ ಸಾಧ್ಯತೆಯಿದೆ.
2021ರ ನವೆಂಬರ್ ಬಳಿಕ ಭಾರತದಲ್ಲಿ ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಪಂಚ ರಾಜ್ಯ ಚುನಾವಣೆ ನಡೆಯುತ್ತಿರುವುದರಿಂದ ಸದ್ಯಕ್ಕೆ ಬೆಲೆ ಏರಿಕೆಯಾಗುವುದು ಅನುಮಾನ. ಚುನಾವಣೆ ಬಳಿಕವೂ ತೈಲ ದರ ಏರಿಕೆಯಾದರೆ ಭಾರತದಲ್ಲೂ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಲಿದೆ.