KARNATAKA
ಸಚಿವ ಸ್ಥಾನಕ್ಕೆ ಸಿ.ಟಿ.ರವಿ ರಾಜೀನಾಮೆ
ಬೆಂಗಳೂರು ಅಕ್ಟೋಬರ್4 : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ನೇಮಕಗೊಂಡಿರುವ ಕನ್ನಡ ಮತ್ತು ಸಂಸ್ಕೃತಿ, ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಸಿ.ಟಿ.ರವಿ ಅಕ್ಟೋಬರ್ 2ರ ಗಾಂಧಿ ಜಯಂತಿಯಂದೇ ರಾಜೀನಾಮೆ ನೀಡಲು ನಿರ್ಧರಿಸಿದ್ದರು. ಆದರೆ ಗಾಂಧಿ ಜಯಂತಿಯಂದು ಸಿಎಂ ಯಡಿಯೂರಪ್ಪ ಸಿಗದ ಕಾರಣ ನಿನ್ನೆ ರಾಜೀನಾಮೆ ಸಲ್ಲಿಸಿದ್ದಾರೆ. ಇನ್ನೂ ಸೋಮವಾರ ದೆಹಲಿಗೆ ಪ್ರಯಾಣ ಬೆಳಸಲಿದ್ದಾರೆ. ಅಲ್ಲಿ ರಾಜೀನಾಮೆ ಬಗ್ಗೆ ಜೆಪಿ ನಡ್ಡಾಗೆ ಮಾಹಿತಿ ತಿಳಿಸಲಿದ್ದಾರೆ.
ಅಕ್ಟೋಬರ್ 5, 6ರಂದು ದೆಹಲಿಯಲ್ಲಿ ಪಕ್ಷದ ಸಂಘಟನಾ ಸಭೆ ನಡೆಯಲಿದೆ. ಹೀಗಾಗಿ ಸಿ.ಟಿ.ರವಿ ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಿ.ಟಿ ರವಿ ರಾಜೀನಾಮೆ ಸ್ವೀಕಾರ ಬಗ್ಗೆ ಸೋಮವಾರವೇ ನಿರ್ಣಯ ತೆಗೆದುಕೊಳ್ಳಲಾಗುತ್ತದೆ.
ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಗ್ಗೆ ರಾಷ್ಟ್ರೀಯ ವರಿಷ್ಠರಿಗೆ ಸಿ.ಟಿ. ರವಿ ಮಾಹಿತಿ ರವಾನೆ ಮಾಡಿದ್ದಾರೆ. ಬಿಜೆಪಿ ಮೂಲಗಳ ಪ್ರಕಾರ ನವೆಂಬರ್‌ನಲ್ಲಿ ಸಚಿವ ಸಂಪುಟ ಪುನಾರಚನೆಯಾಗಲಿದೆ. ಜತೆಗೆ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಕನ್ನಡ-ಸಂಸ್ಕೃತಿ ಇಲಾಖೆಯಲ್ಲಿ ಮಹತ್ವದ ಚಟುವಟಿಕೆಗಳು ನಡೆಯಬೇಕಿದೆ. ಹೀಗಾಗಿ ಈ ಎಲ್ಲ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ಸಚಿವ ಸ್ಥಾನದಲ್ಲಿ ಮುಂದುವರಿಯುವಂತೆ ಸೂಚಿಸುವ ಸಾಧ್ಯತೆ ಇದೆ.
ಅಕ್ಟೋಬರ್ 5 ಹಾಗೂ 6ರಂದು ದಿಲ್ಲಿಯಲ್ಲಿ ಪಕ್ಷದ ಸಂಘಟನಾ ಸಭೆ ನಡೆಯಲಿದೆ. ಪಕ್ಷದ ಆಯಕಟ್ಟಿನ ಹುದ್ದೆಗೆ ಆಯ್ಕೆಗೊಂಡ ರಾಜ್ಯದ ಎಲ್ಲ ಸದಸ್ಯರು ಈ ಸಭೆಯಲ್ಲಿ ಭಾಗವಹಿಸಲಿದ್ದು, ರಾಜೀನಾಮೆ ಬಗ್ಗೆ ವರಿಷ್ಠರು ಅಲ್ಲಿಯೇ ರ್ನಿಯ ತೆಗೆದುಕೊಳ್ಳುವ ಸಾಧ್ಯತೆಯಿದೆ.