KARNATAKA
ಶಿವಮೊಗ್ಗ ಗಲಭೆ – ಎರಡು ದಿನ ಕರ್ಫ್ಯೂ ದಾರಿ

ಶಿವಮೊಗ್ಗ : ಭಜರಂಗದಳದ ಕಾರ್ಯಕರ್ತ ಹರ್ಷನ ಕೊಲೆ ಹಿನ್ನೆಲೆಯಲ್ಲಿ ಗಲಭೆ ಪೀಡಿತ ಶಿವಮೊಗ್ಗದಲ್ಲಿ ಇದೀಗ ಗಲಭೆ ನಿಯಂತ್ರಣಕ್ಕೆ 2 ದಿನಗಳ ಕಾಲ ಕರ್ಫ್ಯೂ ಜಾರಿ ಮಾಡಲಾಗಿದೆ.
ಭಜರಂಗದಳ ಕಾರ್ಯಕರ್ತ ಹರ್ಷನ ಶವಯಾತ್ರೆ ವೇಳೆ ಹಿಂಸಾಚಾರ ನಡೆದಿದ್ದು ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕ ಕ್ರಮವಾಗಿ ಇಂದು ರಾತ್ರಿಯಿಂದ ಬುಧವಾರ ಬೆಳಗ್ಗೆವರೆಗೂ ಕರ್ಫ್ಯೂ ಜಾರಿ ಮಾಡಲಾಗಿದೆ ಎಂದು ಶಿವಮೊಗ್ಗ ಎಸ್ ಪಿ ಲಕ್ಷ್ಮೀ ಪ್ರಸಾದ್ ಹೇಳಿದ್ದಾರೆ.
ಇನ್ನು ಶಿವಮೊಗ್ಗದಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.
