LATEST NEWS
ಪೌರತ್ವ ಗಲಾಟೆ: ಮಂಗಳೂರು ಬಂದರು ಠಾಣಾ ವ್ಯಾಪ್ತಿಯಲ್ಲಿ ಕರ್ಪ್ಯೂ ಜಾರಿ

ಪೌರತ್ವ ಗಲಾಟೆ: ಮಂಗಳೂರು ಬಂದರು ಠಾಣಾ ವ್ಯಾಪ್ತಿಯಲ್ಲಿ ಕರ್ಪ್ಯೂ ಜಾರಿ
ಮಂಗಳೂರು ಡಿಸೆಂಬರ್ 19: ಪೌರತ್ವ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆ ಹಿಂಸಾತ್ಮಕ ರೂಪ ತಾಳಿದೆ. ನಗರದ ಬಂದರು ಠಾಣೆಯ ವ್ಯಾಪ್ತಿಯ ಪ್ರದೇಶಗಳಲ್ಲಿ ವ್ಯಾಪಕ ಹಿಂಸಾಚಾರ ನಡೆದಿದೆ. ಪೊಲೀಸರು ಹಾಗೂ ಕಿಡಿಗೇಡಿಗಳ ನಡುವೆ ಘರ್ಷಣೆ ಸಂಭವಿಸಿದೆ.
ಕಿಡಿಗೇಡಿಗಳು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಹಿನ್ನಲೆಯಲ್ಲಿ ಪೊಲೀಸರು ಲಾಠಿ ಚಾರ್ಜ್ ನಡೆಸಿ ಉದ್ರಿಕ್ತರನ್ನು ಚದುರಿಸಿದ್ದಾರೆ. ಪರಸಿತ್ಥಿ ಹತೋಟಿಗೆ ಬರದ ಹಿನ್ನಲೆ . ಮಂಗಳೂರಿನ ಬಂದರು ಠಾಣಾ ವ್ಯಾಪ್ತಿಯ ಪೊಲೀಸರು ಅಶ್ರುವಾಯು ಸಿಡಿಸಿದ್ದಾರೆ. ಕಿಡಿಗೇಡಿಗಳು ಕೆಲವು ವಾಹನಗಳಿಗೆ ಬೆಂಕಿ ಹಾಕಿದ ಹಿನ್ನಲೆಯಲ್ಲಿ ಪೊಲೀಸರು ಕಿಡಿಗೇಡಿಗಳನ್ನು ನಿಯಂತ್ರಿಸಲು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.

ಕಿಡಿಗೇಡಿಗಳನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಹರಸಾಹಸ ಪಡುತ್ತಿರುವ ನಡುವೆ ಮಂಗಳೂರು ಪೊಲೀಸ್ ಕಮೀಷನರ್ ಡಾ. ಹರ್ಷ ಬಂದರು ಠಾಣಾ ವ್ಯಾಪ್ತಿಯಲ್ಲಿ ನಾಳೆ ಮಧ್ಯರಾತ್ರಿಯವರೆಗೆ ಕರ್ಪ್ಯೂ ಜಾರಿ ಮಾಡಿದ್ದಾರೆ. ಕದ್ರಿ, ಪಾಂಡೇಶ್ವರ, ಬರ್ಕೆ, ಉರ್ವ, ಬಂದರು ಸೇರಿದಂತೆ 5 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕರ್ಪ್ಯೂ ಜಾರಿಯಲ್ಲಿರುತ್ತದೆ.
ಕರ್ಪ್ಯೂ ಜಾರಿ ಮಾಡಿದ ಹಿನ್ನಲೆ ಬಂದರು ಠಾಣಾ ವ್ಯಾಪ್ತಿಯಲ್ಲಿ ಯಾರೂ ಮನೆಯಿಂದ ಹೊರಗೆ ಬರದಂತೆ ಪೊಲೀಸರು ತಿಳಿಸಿದ್ದಾರೆ.
ಕಿಡಿಗೇಡಿಗಳು ಹಿಂಸೆಗೆ ಇಳಿದರೆ ಕಂಡಲ್ಲಿ ಗುಂಡು ಹಾರಿಸುವ ಎಚ್ಚರಿಕೆಯನ್ನು ಪೊಲೀಸರು ನೀಡಿದ್ದಾರೆ.