BELTHANGADI
ಎಸಿ ದುರಸ್ಥಿ ವೇಳೆ ಕರೆಂಟ್ ಶಾಕ್ ಹೊಡೆದು ಯುವಕ ಸಾವು
ಎಸಿ ದುರಸ್ಥಿ ವೇಳೆ ಕರೆಂಟ್ ಶಾಕ್ ಹೊಡೆದು ಯುವಕ ಸಾವು
ಬೆಳ್ತಂಗಡಿ ಜೂ 01: ಕರೆಂಟ್ ಶಾಕ್ ಹೊಡೆದು ಯುವಕನೊಬ್ಬ ಮೃತಪಟ್ಟಿರುವ ಘಟನೆ ಉಜಿರೆ ಸಮೀಪ ಅತ್ತಾಜೆ ಎಂಬಲ್ಲಿ ನಡೆದಿದೆ.
ಮೃತ ಯುವಕನನ್ನನು ಅತ್ತಾಜೆ ನಿವಾಸಿ ಮುಹಮ್ಮದ್ ಸಿರಾಜ್ ಎಂದು ಗುರುತಿಸಲಾಗಿದೆ, ಸಂಬಂಧಿಕರ ಮನೆಯಲ್ಲಿ ಎ.ಸಿ ದುರಸ್ಥಿ ಕಾರ್ಯ ನಡೆಸುತ್ತಿದ್ದ ಸಂದರ್ಭ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆ ಮತ್ತು ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸುವ ಪ್ರಯತ್ನ ನಡೆಸಲಾಯಿತಾದರೂ ಅದಾಗಲೇ ಅವರು ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ.