DAKSHINA KANNADA
ಕಡಬ – ಕರೆಂಟ್ ಶಾಕ್ ಗೆ ಮಹಿಳೆ ಬಲಿ

ಪುತ್ತೂರು ಜೂನ್ 17: ಕರೆಂಟ್ ಶಾಕ್ ಗೆ ಮಹಿಳೆಯೊಬ್ಬರು ಸಾವನಪ್ಪಿದ ಘಟನೆ ಕಡಬ ತಾಲೂಕಿನ ದೋಳ್ಪಾಡಿ ಗ್ರಾಮದ ಕೂರೇಲು ಎಂಬಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.
ಮೃತಪಟ್ಟವರನ್ನು ಕೂರೇಲು ನಿವಾಸಿ ಪುರಂದರ ಎಂಬವರ ಪತ್ನಿ ಜಲಜಾಕ್ಷಿ (38) ಎಂದು ಗುರುತಿಸಲಾಗಿದೆ. ಇವರು ಮದ್ಯಾಹ್ನ ತಮ್ಮ ತೋಟದಲ್ಲಿರುವ ಕೃಷಿ ಪಂಪು ಚಾಲನೆ ಮಾಡಲು ಹೋಗಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ಶಾಕ್ ಹೊಡೆದಿದೆ. ತಕ್ಷಣ ಅವರನ್ನು ಕಾಣಿಯೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಿತ್ತಾದರೂ ಅಷ್ಟರಲ್ಲೇ ಅವರ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
