Connect with us

    DAKSHINA KANNADA

    ಕಡಬ – ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಗೆ ಬಾಗಶಃ ಸುಟ್ಟು ಹೋದ ಮನೆ

    ಉಪ್ಪಿನಂಗಡಿ ಜುಲೈ 01 : ಕರೆಂಟ್ ಶಾರ್ಟ್ ಸರ್ಕ್ಯೂಟ್ ಗೆ ಮನೆಯೊಂದು ಭಾಗಶಃ ಸುಟ್ಟು ಕರಕಲಾದ ಘಟನೆ ಕಡಬ ತಾಲ್ಲೂಕು ಕೊಯಿಲ ಗ್ರಾಮದ ಕೆಮ್ಮಾರ ಎಂಬಲ್ಲಿ ಭಾನುವಾರ ನಡೆದಿದೆ. ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.


    ಕೆಮ್ಮಾರ ಶಾಲೆ ಬಳಿಯ ನಿವಾಸಿ ದಿ.ಇಬ್ರಾಹಿಂ ಎಂಬುವರ ಪುತ್ರ ಅಬ್ದುಲ್ ರಹಿಮಾನ್ ಅವರ ಮನೆಯಲ್ಲಿ ಅವಘಡ ಸಂಭವಿಸಿದೆ. ಮನೆಯ ಮಾಸ್ಟರ್ ಬೆಡ್ ರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮನೆಯೊಳಗೆ ಆವರಿಸಿದೆ. ಮನೆಯೊಳಗೆ ಇದ್ದ ಕಪಾಟು, ಮಂಚ, ಕಿಟಕಿ, ಬಾಗಿಲು, ಫ್ರಿಜ್, ವಾಷಿಂಗ್ ಮೆಸಿಷಿನ್, ಬಟ್ಟೆಗಳು, ಗೃಹೋಪಯೋಗಿ ವಸ್ತುಗಳು, ಆಹಾರ ಸಾಮಗ್ರಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಬೆಂಕಿಯ ತಾಪಕ್ಕೆ 2 ಕಡೆ ಗೋಡೆ ಬಿರುಕು ಬಿಟ್ಟಿದೆ. ಬೆಂಕಿ ಕಾಣಿಸಿಕೊಂಡ ಕೋಣೆಯಲ್ಲಿ ಗ್ರಾನೈಟ್ ಮತ್ತು ಅಡುಗೆ ಕೋಣೆಯಲ್ಲಿ ನೆಲದ ಟೈಲ್ಸ್ ಸಿಡಿದಿದೆ. ಇದರಿಂದಾಗಿ ಸುಮಾರು ₹ 35 ಲಕ್ಷ ನಷ್ಟ ಉಂಟಾಗಿದೆ ಎಂದು ಅಬ್ದುಲ್ ರಹಿಮಾನ್ ಅವರು ಕಂದಾಯ ಇಲಾಖೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

    ಮನೆಯಲ್ಲಿ ಅಬ್ದುಲ್ ರಹಿಮಾನ್ ಅವರ ತಾಯಿ ಸಕೀನ ಮಾತ್ರ ಇದ್ದು, ಮನೆಯೊಳಗೆ ಹೊಗೆ ತುಂಬುವುದನ್ನು ಗಮನಿಸಿ ಮನೆಯಿಂದ ಹೊರ ಬಂದು ಬೊಬ್ಬೆ ಹಾಕಿ ಪಕ್ಕದ ಮನೆಯವರನ್ನು ಕರೆದಿದ್ದಾರೆ. ಪಕ್ಕದ ಮನೆಯವರು ಸ್ಥಳೀಯರಿಗೆ ಕರೆ ಮಾಡಿದ್ದಾರೆ. ಅಬ್ದುಲ್ ರಹಿಮಾನ್, ಪತ್ನಿ, ಮಕ್ಕಳು ಪತ್ನಿಯ ತವರು ಮನೆಗೆ ಹೋಗಿದ್ದರು. ವರ್ಷದ ಹಿಂದೆ ಮನೆ ನಿರ್ಮಿಸಲಾಗಿತ್ತು.

    Share Information
    Advertisement
    Click to comment

    Leave a Reply

    Your email address will not be published. Required fields are marked *