LATEST NEWS
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಕ್ಕಳ ಆಟಿಕೆಯಲ್ಲಿ ಚಿನ್ನ ಸಾಗಾಟಕ್ಕೆ ಯತ್ನ

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಕ್ಕಳ ಆಟಿಕೆಯಲ್ಲಿ ಚಿನ್ನ ಸಾಗಾಟಕ್ಕೆ ಯತ್ನ
ಮಂಗಳೂರು ನವೆಂಬರ್ 4: ಅಕ್ರಮವಾಗಿ ಸಾಗಿಸಲು ಯತ್ನಿಸಲಾಗುತ್ತಿದ್ದ 9.65 ಲಕ್ಷ ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ.
ದುಬೈಯಿಂದ ಮಂಗಳೂರಿಗೆ ಎರ್ ಇಂಡಿಯಾ ವಿಮಾನದಲ್ಲಿ ಆಗಮಿಸಿದ ಪ್ರಯಾಣಿಕರೊಬ್ಬರು ಚಿನ್ನವನ್ನು ಮಕ್ಕಳ ಆಟಿಕೆಯಲ್ಲಿ ಪ್ಲೆಟ್ ರೂಪದಲ್ಲಿ ಪರಿವರ್ತಿಸಿ ಅಡಗಿಸಿಟ್ಟುಕೊಂಡು ಅಕ್ರಮವಾಗಿ ಸಾಗಿಸಲು ಯತ್ನಿಸಿದ್ದಾರೆ. ಅನುಮಾನಗೊಂಡ ಕಸ್ಟಮ್ಸ್ ಅಧಿಕಾರಿಗಳು ಪ್ರಯಾಣಿಕನನ್ನು ಕೂಲಂಕುಷವಾಗಿ ತನಿಖೆಗೆ ಒಳಪಡಿಸಿದಾಗ ಈ ಅಕ್ರಮ ಸಾಗಾಟ ಬಯಲಿಗೆ ಬಂದಿದೆ. ಆರೋಪಿಯಿಂದ 9.65 ಲಕ್ಷ ಮೌಲ್ಯದ 252.98 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿ ವಿರುದ್ದ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
