Connect with us

KARNATAKA

ಮಂಗಳೂರಿನಲ್ಲಿ ಹೆಚ್ಚುತ್ತಿದೆ ಸೈಬರ್ ಕ್ರೈಂ , ASI ಬ್ಯಾಂಕ್ ಖಾತೆಯಿಂದಲೂ ಹಣ ಗುಳುಂ..!

ನಗರದ ಉಪನೋಂದಣಿ ಕಚೇರಿಯಲ್ಲಿ ಆಧಾರ್ ಸಂಖ್ಯೆ ಮತ್ತು ಬೆರಳಚ್ಚು ನೀಡಿರುವ ಗ್ರಾಹಕರ  ಬ್ಯಾಂಕ್ ಖಾತೆಗಳಿಂದ ಹಣ ಕದಿಯುವ ಪ್ರಕರಣಗಳು ಅಧಿಕ ಸಂಖ್ಯೆಯಲ್ಲಿದ್ದು ಕಳೆದ  ಒಂದು ತಿಂಗಳು ಅಂತರದಲ್ಲಿ 8ಕ್ಕೂ ಅಧಿಕ ಪ್ರಕರಣ ದಾಖಲಾಗಿವೆ.

ಮಂಗಳೂರು: ಸುಸುಕ್ಷಿತ ನಗರವೆಂದೇ ಖ್ಯಾತಿ ಪಡೆದಿರುವ ಮಂಗಳೂರಿನಲ್ಲಿ ಸೈಬರ್ ಕ್ರೈಂ ದಿನದಿಂದ ದಿಕ್ಕೆ ಹೆಚ್ಚಾಗುತ್ತಿದ್ದುಅನೇಕರು ಲಕ್ಷಾಂತರ ರೂಪಾಯಿಗಳನ್ನು ಈಗಾಗಲೇ ಕಳಕೊಂಡಿದ್ದಾರೆ.

ಇದೀ್ ನಗರದ ಕಿರಿಯ ಪೊಲೀಸ್ ಅಧಿಕಾರಿಯ ಬ್ಯಾಂಕ್ ಖಾತೆಗೂ ಕಳ್ಳರು ಕನ್ನಹಾಕಿದ್ದು ಸಾವಿರಾರು ರೂಪಾಯಿಗಳನ್ನು ಎಗರಿಸಿದ್ದಾರೆ.

ವಿಶೇಷ ಅಂದ್ರೆ ನಗರದ ಉಪನೋಂದಣಿ ಕಚೇರಿಯಲ್ಲಿ ಆಧಾರ್ ಸಂಖ್ಯೆ ಮತ್ತು ಬೆರಳಚ್ಚು ನೀಡಿರುವ ಗ್ರಾಹಕರ  ಬ್ಯಾಂಕ್ ಖಾತೆಗಳಿಂದ ಹಣ ಕದಿಯುವ ಪ್ರಕರಣಗಳು ಅಧಿಕ ಸಂಖ್ಯೆಯಲ್ಲಿದ್ದು ಕಳೆದ  ಒಂದು ತಿಂಗಳು ಅಂತರದಲ್ಲಿ 8ಕ್ಕೂ ಅಧಿಕ ಪ್ರಕರಣ ದಾಖಲಾಗಿವೆ.

ಮಂಗಳೂರು ದಕ್ಷಿಣ ಸಂಚಾರಿ ಠಾಣೆಯ ASI ಆಲ್ಬರ್ಟ್ ಲಸ್ರಾದೋ ಹಣ ಕಳಕೊಂಡ ಅಧಿಕಾರಿಯಾಗಿದ್ದು. ಸೈಬರ್ ಅಪರಾಧಗಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಲಸ್ರಾದೋ ಅವರು ಆ.2ರಂದು ಮಂಗಳೂರಿನ ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಜಾಗ ಮಾರಾಟದ ಬಗ್ಗೆ ಹೆಬ್ಬೆರಳಿನ ಗುರುತು ಮತ್ತು ಆಧಾರ್ ಕಾರ್ಡ್ ಪ್ರತಿಯನ್ನು ನೀಡಿದ್ದರು ಎನ್ನಲಾಗಿದೆ.

ಅಪರಿಚಿತರು ಈ ತಂತ್ರಾಂಶ ವನ್ನು ಬಳಸಿಕೊಂಡು ಎಸ್‌ಬಿಐ ಬ್ಯಾಂಕ್ ಖಾತೆಯಿಂದ ಹಂತಹಂತವಾಗಿ 36,890 ರೂಪಾಯಿ ಹಣ ಎಗರಿಸಿದ್ದಾರೆ ಎಂದು ತಿಳಿದು ಬಂದಿದೆ.

ಮ್ಯಾಕ್ಸಿಂ ಎಂಬವರು ಸೊಸೈಟಿಯೊದರಲ್ಲಿ ಆಧಾರ್ ಕಾರ್ಡ್ ಮತ್ತು ಬೆರಳಚ್ಚು ನೀಡಿ ಹಣ ಕಳಕೊಂಡಿದ್ದಾರೆ. ಸಾಲ ವಿಚಾರದಲ್ಲಿ ಗುರುಪುರದ ಸಹಕಾರಿ ಸಂಘ ಒಂದಕ್ಕೆ ತೆರಳಿದ್ದ ಅವರು ಅಲ್ಲಿ ಆಧಾರ್ ಮತ್ತು ಬೆರಳಚ್ಚು ನೀಡಿದ್ದರು ಎಂದು ಹೇಳಲಾಗಿದೆ. ಅಕ್ಟೋಬರ್ ತಿಂಗಳಾರಂಭದಲ್ಲಿ ದಿನಕ್ಕೆ 5,000 ರೀತಿ ಮೂರು ದಿನ ಅವರ ಬ್ಯಾಂಕ್ ಖಾತೆಯಿಂದ ಹಣ ಕಡಿತವಾಗಿದೆ. ಈ ಬಗ್ಗೆ ಬ್ಯಾಂಕಿನಲ್ಲಿ ಅವರು ವಿಚಾರಿಸಿದಾಗ, ಆಧಾರ್ ಕಾರ್ಡ್ ಸೋರಿಕೆಯಾಗಿರುವ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮ್ಯಾಕ್ಸಿಂ ಕುಟಿನ್ಹೋ ಮಂಗಳೂರಿನ ಸೈಬರ್ ಠಾಣೆಗೆ ದೂರು ನೀಡಿದ್ದಾರೆ.

ಈ ಮಧ್ಯೆ ಮಂಗಳೂರು ಸಬ್ ರಿಜಿಸ್ಟ್ರೇಷನ್ ಕಚೇರಿಯಲ್ಲಿ ಸೈಬರ್ ವಂಚನಾ ಜಾಲದ ಬಗ್ಗೆ ನಗರ ಪೊಲೀಸರಿಗೆ ಮಹತ್ವದ ಮಾಹಿತಿ ಲಭಿಸಿದೆ ಎನ್ನಲಾಗಿದ್ದು ಒಂದೆರಡು ದಿನಗಳಲ್ಲೇ ಪ್ರಕರಣ ಬಯಲಿಗೆಳೆಯುವ ವಿಶ್ವಾಸವನ್ನು ಮಮಗಳೂರು ಪೊಲೀಸರು ವ್ಯಕ್ತಪಡಿಸಿದ್ದಾರೆ.

Share Information
Advertisement
Click to comment

You must be logged in to post a comment Login

Leave a Reply