Connect with us

FILM

ಪುನೀತ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಪದ ಬಳಕೆ – ಆರೋಪಿ ಪೊಲೀಸ್ ವಶಕ್ಕೆ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನದ ಸಂದರ್ಭ ಮಧ್ಯ ಸಿಗದಕ್ಕೆ ಬೇಸರಗೊಂಡು ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಪದಗಳಿಂದ ಪುನೀತ್ ಅವರನ್ನು ಅವಮಾನಿಸಿದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಪುನೀತ್ ರಾಜ್ ಕುಮಾರ್ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಬೆಂಗಳೂರಿನಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗಿತ್ತು. ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದೇ ಇರಲಿ ಎಂಬುದು ಈ ಆದೇಶದ ಹಿಂದಿನ ಉದ್ದೇಶ ಆಗಿತ್ತು. ಕುಡಿದ ಅಮಲಿನಲ್ಲಿ ಅಭಿಮಾನಿಗಳು ಭಾವೋದ್ವೇಗಕ್ಕೆ ಒಳಗಾಗಬಹುದು. ಅದನ್ನು ತಪ್ಪಿಸಲು ಮದ್ಯ ಮಾರಾಟಕ್ಕೆ ಬ್ರೇಕ್​ ಹಾಕಲಾಗಿತ್ತು.

ಆದರೆ, ಈ ಆದೇಶ ಕೆಲವರಿಗೆ ಕಿರಿಕಿರಿಯುಂಟು ಮಾಡಿತ್ತು. ಕೀಳು ಮನಸ್ಸಿನ ವ್ಯಕ್ತಿಯೊಬ್ಬ ಮದ್ಯ ಬಾಟಲಿಯ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳುವುದರ ಜೊತೆಗೆ, ರಾಜ್ ಕುಮಾರ್ ನಮ್ಮನ್ನು ತಡೆಯಲು ಸಾಧ್ಯವಿಲ್ಲ. ಆತನನ್ನು ನೆನಪಿಟ್ಟುಕೊಳ್ಳಿ. ಮರೆಯಬೇಡಿ. ಯಾಕೆಂದರೆ, ಇದನ್ನು ಕುಡಿದ ಬಳಿಕ ಅವನ ಸಮಾಧಿ ಮೇಲೆ ನಾವು ಮೂ** ಮಾಡುತ್ತೇವೆ ಎಂದು ಅಶ್ಲೀಲ ಪದಗಳನ್ನು ಬಳಸಿ ಪೋಸ್ಟ್ ಮಾಡಿದ್ದ ನಟ ಪುನೀತ್ ರಾಜ್ ಕುಮಾರ್ ಅವರ ನಿಧನದ ಬಳಿಕ ಮದ್ಯ ಸಿಗದ್ದಕ್ಕೆ ಕಿರಿಕಿರಿಗೊಂಡು ನಟನನ್ನು ಅಶ್ಲೀಲ ಪದಗಳಿಂದ ಅವಮಾನಿಸಿದ್ದವರ ವಿರುದ್ಧ ಕಿಚ್ಚ ಸುದೀಪ್ ಅವರ ಪುತ್ರಿ ಸಾನ್ವಿ ಸುದೀಪ್ ಅವರು ತೀವ್ರವಾಗಿ ಕಿಡಿಕಾರಿದ್ದಾರೆ. ಕೇವಲ ಆಲ್ಕೋಹಾಲ್​ಗಾಗಿ ಪುನೀತ್​ ಬಗ್ಗೆ ಇಂಥ ವರ್ತನೆಯೇ? ಜನರಲ್ಲಿ ಮನುಷ್ಯತ್ವ ಉಳಿದಿಲ್ಲವೇ?’ ಎಂದು ಸಾನ್ವಿ ಛೀಮಾರಿ ಹಾಕಿದ್ದಾರೆ.

ಈ ಹಿನ್ನಲೆ ನಗರ ಸೈಬರ್ ಪೊಲೀಸರು ಪೋಸ್ಟ್ ಹಿಂದೆ ಬಿದ್ದಿದ್ದರು. ಇದೀಗ ಪೋಸ್ಟ್ ಮಾಡಿದ್ದ ವ್ಯಕ್ತಿಯನ್ನು ಬಂಧಿಸಿದ್ದು, ಆರೋಪಿ ಬಗ್ಗೆ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಅಲ್ಲದೇ ವ್ಯಕ್ತಿಯ ಹೆಸರನ್ನು ಪೊಲೀಸರು ಬಹಿರಂಗ ಪಡಿಸಿಲ್ಲ

Share Information
Continue Reading
Advertisement
Click to comment

Leave a Reply

Your email address will not be published. Required fields are marked *