Connect with us

LATEST NEWS

ಸೈಕಲ್ ಗೆ ಡಿಕ್ಕಿ ಹೊಡೆದ ಕಾರು – ಸೈಕಲ್ ಸವಾರ ಸಾವು

ಕುಂದಾಪುರ ಜುಲೈ 28: ಕಾರೊಂದು ಸೈಕಲ್ ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಾಲಾಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಮೃತರನ್ನು ಸ್ಥಳೀಯ ಸಂತೋಷ್ ನಗರದ ನಿವಾಸಿ ರಾಮ ಕುಲಾಲ್(52) ಎಂದು ಗುರುತಿಸಲಾಗಿದೆ.


ರಾಮ ಕುಲಾಲ್ ಅವರು ಹೆಮ್ಮಾಡಿಯಿಂದ ತಮ್ಮ ಸೈಕಲ್ ನಲ್ಲಿ ತಲ್ಲೂರಿಗೆ ತೆರಳುತ್ತಿರುವ ಹೊತ್ತಿಗೆ ಈ ಅಪಘಾತ ನಡೆದಿದೆ. ಸೈಕಲ್‌ ಡಿವೈಡರ್ ಬದಿಯಿಂದ ರಸ್ತೆಯ ಎಡಗಡೆಗೆ ತಿರುಗಿಸಿದ ಪರಿಣಾಮ ಬೈಂದೂರು ಕಡೆಯಿಂದ ಕುಂದಾಪುರದತ್ತ ತೆರಳುತ್ತಿದ್ದ ಕಾರು ಸೈಕಲ್ ಗೆ ಢಿಕ್ಕಿಯಾಗಿದೆ. ಢಿಕ್ಕಿಯ ರಭಸಕ್ಕೆ ಸೈಕಲ್‌ನಲ್ಲಿದ್ದ ರಾಮ ಕುಲಾಲ್ ಅವರು ಕೆಲ ದೂರ ಹೋಗಿ ಬಿದ್ದ ಪರಿಣಾಮ ತಲೆ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿತ್ತು.
ಆಸ್ಪತ್ರಗೆ ದಾಖಲಿಸಲು ಪ್ರಯತ್ನಿಸುತ್ತಿರುವ ಸಂದರ್ಭ ಅವರ ಕೊನೆಯುಸಿರೆಳೆದಿದ್ದಾರೆ. ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.