LATEST NEWS
ಅರಬ್ಬೀ ಸಮುದ್ರದಲ್ಲಿ ಚಂಡಮಾರುತ – ಕರಾವಳಿಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಎಚ್ಚರಿಕೆ

ಮಂಗಳೂರು ಮೇ 21: ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆ ಆರ್ಭಟ ಜೋರಾಗಿದೆ. ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ. ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಗೆ ಜನ ಜೀವನ ಅಸ್ತವ್ಯಸ್ತಗೊಂಡಿದೆ.
ಹವಾಮಾನ ಇಲಾಖೆ ಇನ್ನೂ ಮಳೆ ಮುಂದುವರೆಯೂ ಸೂಚನೆ ಕೊಟ್ಟಿದೆ. ಅಲ್ಲದೇ ಇನ್ನೂ ನಾಲ್ಕೇ ದಿನದಲ್ಲಿ ಕೇರಳಕ್ಕೆ ಮುಂಗಾರು ಪ್ರವೇಶ ಮಾಡುತ್ತೆ, ರಾಜ್ಯದಲ್ಲಿ ಇನ್ನಷ್ಟು ಮಳೆ ತೀವ್ರಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದೆ.

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಇನ್ನೂ ಎರಡು ದಿನ ಹೀಗೆ ಮಳೆ ಮುಂದುವರೆಯಲಿದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ. ಸೈಕ್ಲೋನ್ ಪ್ರಭಾವದಿಂದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಇನ್ನೂ ಎರಡು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನೂ ಎರಡು ಮೂರು ದಿನ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಮಳೆ ಅಬ್ಬರ ಜಾಸ್ತಿಯಾಗುವ ಹಿನ್ನಲೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಪ್ರವಾಹ ಪರಿಸ್ಥಿತಿ ಉಂಟಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಎಚ್ಚರಿಸಿದೆ.